ADVERTISEMENT

ನಾಗರಿಕ ಹಕ್ಕುಗಳ ರಕ್ಷಣೆ ನಮ್ಮ ಕರ್ತವ್ಯ:ನ್ಯಾಯಾಧೀಶ ಕೆ. ಮಾರುತಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 9:20 IST
Last Updated 9 ನವೆಂಬರ್ 2022, 9:20 IST
ಸುರಪುರ ತಾಲ್ಲೂಕಿನ ರುಕ್ಮಾಪುರದ ವಾಲ್ಮೀಕಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು
ಸುರಪುರ ತಾಲ್ಲೂಕಿನ ರುಕ್ಮಾಪುರದ ವಾಲ್ಮೀಕಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು   

ಸುರಪುರ: ‘ನಾಗರಿಕ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಹಕ್ಕುಗಳಿಗೆ ಚ್ಯುತಿಪಡಿಸುವುದು ಶಿಕ್ಷಾರ್ಹ ಅಪರಾಧ. ಹಕ್ಕುಗಳಿಂದ ವಂಚಿತರಾದವರು ಕಾನೂನಿನ ಉಚಿತ ನೆರವು ಪಡೆದು ಹಕ್ಕು ಪಡೆದುಕೊಳ್ಳಬಹುದು’ ಎಂದು ನ್ಯಾಯಾಧೀಶ ಕೆ. ಮಾರುತಿ ಹೇಳಿದರು.

ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನಾಗರಿಕ ಸಬಲೀಕರಣ ಕುರಿತು ಅವರು ಮಾತನಾಡಿದರು.

‘ನಗರದ ಕೋರ್ಟ್‍ನಲ್ಲಿ ನ. 12 ರಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ. ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಕಕ್ಷಿದಾರರು ಈ ಅದಾಲತ್‍ನ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಮ್ಮ ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಸವರಾಜ, ಎಪಿಪಿ ಮರೆಪ್ಪ ಹೊಸಮನಿ, ತಾಪಂ ಇಒ ಚಂದ್ರಶೇಖರ ಪವ್ಹಾರ, ವಕೀಲರ ಸಂಘದ ಅಧ್ಯಕ್ಷ ನಂದಣ್ಣ ಬಾಕ್ಲಿ, ವಕೀಲರಾದ ಶಿವಾನಂದ ಅವಂಟಿ, ಜ್ಯೋತಿ ನಾಯಕ, ಗೋಪಾಲ ತಳವಾರ, ಸವಿತಾ ಬಿರಾದಾರ, ಪಿಡಿಒ ಸಂಗೀತಾ ಸಜ್ಜನ್, ಮುಖ್ಯ ಶಿಕ್ಷಕ ಮಹೇಶ ಕುಂಟೋಜಿ, ಮಂಜುನಾಥ ಹುದ್ದಾರ, ಮಂಜುನಾಥ ಚಟ್ಟಿ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.