ADVERTISEMENT

ಯಾದಗಿರಿ | ಹಿರಿಯ ನಾಗರಿಕರಿಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 6:18 IST
Last Updated 17 ಸೆಪ್ಟೆಂಬರ್ 2025, 6:18 IST
ಯಾದಗಿರಿಯಲ್ಲಿ ಈಚೆಗೆ ನಡೆದ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಗರಿಕರು
ಯಾದಗಿರಿಯಲ್ಲಿ ಈಚೆಗೆ ನಡೆದ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಗರಿಕರು   

ಯಾದಗಿರಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳನ್ನು ಈಚೆಗೆ ಆಯೋಜಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ, ‘ಹಿರಿಯ ನಾಗರಿಕರಿಗೆ ಮಾನಸಿಕ ಚೈತನ್ಯ ನೀಡಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು. 

ADVERTISEMENT

ಕ್ರೀಡಾ ಸ್ಪರ್ಧೆಗಳಲ್ಲಿ ಹಲವು ಹಿರಿಯ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡು, ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು. ಬಂದತಂಹ ಹಿರಿಯರ ಪೈಕಿ ಕೆಲವರು ತಮ್ಮ ಮಕ್ಕಳು ಮೊಮ್ಮಕ್ಕಳೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಮತ್ತೆ ಕೆಲವರು ಏಕಾಂಗಿಯಾಗಿ ಬಂದು, ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಂಡೆಪ್ಪ ಆಕಳ್, ಪ್ರಮುಖರಾದ ಅಜಿತ್ ಧೋಖಾ, ಬಲವಂತ್ ಅನವಾರ್, ಹಿರಿಯ ನಾಗರಿಕರ ಕ್ಷೇತ್ರದಲ್ಲಿನ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪುನರ್ವಸತಿ ಕಾರ್ಯಕರ್ತರು, ವೃದ್ಧಾಶ್ರಮ ಕೇಂದ್ರದ ನಾಗರಿಕರು, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು. ವಿಶ್ವನಾಥರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.