ADVERTISEMENT

ಆತ್ಮಾಭಿಮಾನ ಮೂಡಿಸಿದ ಸಂತ: ಸೇವಾಲಾಲ್ ಜಯಂತಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 6:34 IST
Last Updated 16 ಫೆಬ್ರುವರಿ 2022, 6:34 IST
ಹುಣಸಗಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ ಸೇವಾಲಾಲ್ ಅವರ 283ನೇ ಜಯಂತಿ ಆಚರಿಸಲಾಯಿತು
ಹುಣಸಗಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ ಸೇವಾಲಾಲ್ ಅವರ 283ನೇ ಜಯಂತಿ ಆಚರಿಸಲಾಯಿತು   

ಹುಣಸಗಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ, ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲರ ಜಯಂತಿಯಲ್ಲಿ ಶಿಕ್ಷಕ ಗುರು ರಾಠೋಡ ಮಾತನಾಡಿ, ಬಂಜಾರಾ ಜನಾಂಗದ ಆರಾಧ್ಯ ಸಂತರಾದ ಸೇವಾಲಾಲರು ಸಮಾಜದ ಒಳಿತಿಗಾಗಿ ಸಾಕಷ್ಟು ಕಾರ್ಯಗಳನ್ನು ಕೈಗೊಂಡರು. ಬಾಲ ಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಆಧ್ಯಾತ್ಮ ಸಾಧನೆಯಿಂದ ದೇವರನ್ನು ಸಾಕ್ಷಾತ್ಕಾರ ಮಾಡಿಕೊಂಡಿದ್ದರು ಎಂದರು.

ಬಂಜಾರಾ ಜನಾಂಗ ಸನ್ಮಾರ್ಗದತ್ತ ಕೊಂಡೊಯ್ದ ಅವರು ತಮ್ಮ ಜನರಲ್ಲಿ ಅಧ್ಯಾತ್ಮದೊಂದಿಗೆ ಆತ್ಮಾಭಿಮಾನ ಮೂಡಿಸಿದವರು ಎಂದು ಬಣ್ಣಿಸಿದರು.

ADVERTISEMENT

ಮುಖ್ಯಶಿಕ್ಷಕಿ ಶ್ರೀದೇವಿ ಜೋಶಿ, ಎಸ್ಡಿಎಂಸಿ ಅಧ್ಯಕ್ಷ ರವೀಂದ್ರ, ರಮೇಶ ಹಡಪದ, ಪರಮಣ್ಣ, ದೇವಮ್ಮ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.