ADVERTISEMENT

ಶಹಾಪುರ |ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಮೇ 2025, 14:34 IST
Last Updated 4 ಮೇ 2025, 14:34 IST
   

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಹಿರೇ ಅಗಸಿ ಸರ್ಕಾರಿ ಶಾಲೆಯ ಗೋಡೆ ಬರಹದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನ ಮಾಡಿರುವುದನ್ನು ಖಂಡಿಸಿ ಭಾನುವಾರ ದಲಿತ ಸಂಘಟನೆಗಳ ಮುಖಂಡರು ಶಹಾಪುರ-ಯಾದಗಿರಿ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಭಾವಚಿತ್ರಕ್ಕೆ ಅಪಮಾನದ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಹಾಪುರ ಠಾಣೆಯ ಪಿಐ ಎಸ್.ಎಂ.ಪಾಟೀಲ ಅವರು ಕೃತ್ಯ ಎಸಗಿದ ದುಷ್ಟ ವ್ಯಕ್ತಿಗಳನ್ನು ಬಂಧಿಸಲಾಗುವುದು ಎಂಬ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಖಂಡರು ಪ್ರತಿಭಟನೆ ಹಿಂಪಡೆದರು.

ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.