ಶಹಾಪುರ: ನಗರದ ಮಡಿವಾಳೇಶ್ವರ ಬಡಾವಣೆಯಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ₹6.99ಲಕ್ಷ ಹಾಗೂ 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ಕಕ್ಕಸಗೇರಾ ತಾಂಡಾದ ಪುಂಡಲಿಕ ಜಾದವ ಹಾಗೂ ಸುರಪುರ ತಾಲ್ಲೂಕಿನ ಏವೂರ ದೊಡ್ಡ ತಾಂಡಾದ ಭಾಸ್ಕರ ರಾಠೋಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.