ADVERTISEMENT

ಶಹಾಪುರ: ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 15:20 IST
Last Updated 1 ಮಾರ್ಚ್ 2025, 15:20 IST
ಶಹಾಪುರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಬಗ್ಗೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಿದ್ದರಾಮ ಟಿ.ಪಿ ಮಾಹಿತಿ ನೀಡಿದರು. ನ್ಯಾಯಾಧೀಶರಾದ ಶೋಭಾ, ಬಸವರಾಜ ಉಪಸ್ಥಿತರಿದ್ದರು
ಶಹಾಪುರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಬಗ್ಗೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಿದ್ದರಾಮ ಟಿ.ಪಿ ಮಾಹಿತಿ ನೀಡಿದರು. ನ್ಯಾಯಾಧೀಶರಾದ ಶೋಭಾ, ಬಸವರಾಜ ಉಪಸ್ಥಿತರಿದ್ದರು    

ಶಹಾಪುರ: ‘ವ್ಯಾಜ್ಯ ರಹಿತ ಸಮಾಜ ನಿರ್ಮಾಣ ಹಾಗೂ ಸಮ ಸಮಾಜ ನಿರ್ಮಿಸುವುದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಮಾ.8ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಕಕ್ಷಿದಾರರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಸಿದ್ದರಾಮ ಟಿ.ಪಿ ತಿಳಿಸಿದರು.

‘ನಗರದ ನ್ಯಾಯಾಲಯದಲ್ಲಿ ಶನಿವಾರ ಮಾ.8ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಬಗ್ಗೆ ಅವರು ಮಾಹಿತಿ ನೀಡಿದರು. ಅದಾಲತ್‌ನಲ್ಲಿ ರಾಜಿಯಾಗಬಲ್ಲ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಚೆಕ್ ಅಮಾನ್ಯ, ಜೀವನಾಂಶ, ಜನನ ನೋಂದಣಿ, ಮೋಟಾರು ಅಪಘಾತ ಪರಿಹಾರ, ರಾಜಿಯಾಗಬಲ್ಲ ಸಿವಿಲ್ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳನ್ನು ಕೈಗೆತ್ತಿಕೊಂಡು ಉಭಯ ಪಕ್ಷಗಾರರ ರಾಜಿ ಸಂಧಾನ ಮಾಡಲಾಗುತ್ತದೆ’ ಎಂದರು.

‘ಡಿಸೆಂಬರ್ ತಿಂಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 2032 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪ್ರಸಕ್ತ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸಲು ಉಭಯ ಪಕ್ಷಗಾರರ ಹಾಗೂ ವಕೀಲರ ಸಹಕಾರ ಅಗತ್ಯವಾಗಿದೆ’ ಎಂದರು.

ADVERTISEMENT

ಪ್ರಧಾನ ಸಿವಿಲ್ ನ್ಯಾಯಾಧೀಶೆ ಶೋಭಾ, ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ, ವಕೀಲರ ಸಂಘದ ಉಪಾಧ್ಯಕ್ಷ ಜೈಲಾಲ ತೋಟದಮನೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.