ADVERTISEMENT

ಶಹಾಪುರ ತಾಲ್ಲೂಕಿನಲ್ಲಿ ಅಪಘಾತ: ವಿದ್ಯಾರ್ಥಿಯ ಕಾಲು ತುಂಡು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 23:35 IST
Last Updated 21 ಫೆಬ್ರುವರಿ 2026, 23:35 IST
<div class="paragraphs"><p>ಅಪಘಾತ</p></div>

ಅಪಘಾತ

   

ಸಾಂದರ್ಭಿಕ ಚಿತ್ರ

ಯಾದಗಿರಿ: ಶಹಾಪುರ ತಾಲ್ಲೂಕಿನ ದೋರನಹಳ್ಳಿ ಸಮೀಪದ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬರ ಕಾಲು ತುಂಡಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಈಶ್ವರ (17) ಎಂಬುವವರ ಕಾಲು ತೊಡೆಯ ಭಾಗದಿಂದ ತುಂಡಾಗಿ ರಕ್ತಸಿಕ್ತವಾಗಿ ಬಿದ್ದಿದೆ. ಆತನ ಜೊತೆಯಲ್ಲಿದ್ದ ಕನಕಣ್ಣ (16) ಮತ್ತು ಮಹೇಶ (15) ಸಹ ಗಾಯಗೊಂಡಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರೂ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ಯಾದಗಿರಿಯಲ್ಲಿನ ಶಿಕ್ಷಕರೊಬ್ಬರನ್ನು ಭೇಟಿಯಾಗಿ ಶಹಾಪುರಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಈಶ್ವರ ಕಾಲು ತುಂಡಾಗಿ ಬಿದ್ದಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಉಳಿದ ಇಬ್ಬರಿಗೆ ಸಣ್ಣ ಪುಟ್ಟಗಾಯವಾಗಿವೆ ಎಂದು ಪೊಲೀಸರೊಬ್ಬರು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.