ಶಹಾಪುರ: ‘ಹಿಂದುಳಿದ ಅನ್ಯ ಸಮುದಾಯವನ್ನು ಎಸ್.ಟಿ (ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರ್ಪಡೆ ಮಾಡಬಾರದು ಹಾಗೂ ನಕಲಿ ಎಸ್.ಟಿ ಜಾತಿ ಪ್ರಮಾಣ ಪತ್ರದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಗುರುವಾರ ವಾಲ್ಮೀಕಿ ನಾಯಕ ಸಂಘದ ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ವಾಲ್ಮೀಕಿ ನಾಯಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೆಪ್ಪ ಪ್ಯಾಟಿ ಶಿರವಾಳ ಮಾತನಾಡಿ, ‘ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅನವಶ್ಯಕವಾಗಿ ಜಾತಿ ನಡುವೆ ಗೊಂದಲ ಹಾಗೂ ಅಸಹನೆಯನ್ನು ಉಂಟು ಮಾಡಿದೆ. ಆರ್ಥಿಕವಾಗಿ ಸಾಕಷ್ಟು ಸಬಲರಾಗಿರುವ ಕುರುಬ, ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದು ನಿಲ್ಲಿಸಬೇಕು ಎಂದರು.
ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಹುದ್ದೆ ಕಬಳಿಸಿರುವ ದುಷ್ಟ ಶಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಶೇಖರ ದೊರೆ, ಹಣಮಂತರಾಯ ದೊರೆ ಟೋಕಾಪುರ, ಮಾನಶಪ್ಪ ದೇವದುರ್ಗ, ಶಿವರಾಜ ಹವಾಲ್ದಾರ್, ಶ್ರೀನಿವಾಸ ಯಕ್ಷಿಂತಿ, ಭೀಮಣ್ಣ ಮಕಾಶಿ, ದೇವಿಂದ್ರ ಗಂಗನಾಳ, ಅಂಬಲಪ್ಪ ಸಗರ, ಕೊಂಡಯ್ಯ, ವೆಂಕಟೇಶ ಶಾರದಹಳ್ಳಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.