
ಸುರಪುರ: ಮತಕ್ಷೇತ್ರದ ಕನ್ನೆಳ್ಳಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಜಲಜೀವನ ಮಿಷನ್ ಯೋಜನೆಯ ಅಡಿಯಲ್ಲಿ ಮನೆಮನೆಗೆ ನಲ್ಲಿ ಅಳವಡಿಸುವ ಹಾಗೂ ಪೈಪ್‌ಲೈನ್ ನಿರ್ಮಿಸುವ ಯೋಜನೆಯ ₹ 2 ಕೋಟಿ ವೆಚ್ಚದ ಕಾಮಗಾರಿ ಇದಾಗಿದೆ. ಈ ಕಾಮಗಾರಿಯಿಂದ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ದೊರಕಲಿದೆ’ ಎಂದು ಹೇಳಿದರು.
‘ಸಂಬಂಧಿಸಿದವರು ಗುಣಮಟ್ಟದೊಂದಿಗೆ ಅಚ್ಚುಕಟ್ಟಾಗಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಸಂಬಂಧಿಸಿದ ಇಲಾಖೆಯವರು ಕಾಮಗಾರಿ ಪರಿಶೀಲಿಸಬೇಕು. ಗೊತ್ತುಪಡಿಸಿದ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.
ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಭೀಮರಾಯ, ಗೋಪಾಲ ದೊರೆ, ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.