ಕೆಂಭಾವಿ: ಶ್ರಾವಣ ಮಾಸದ ನಿಮಿತ್ತ ಪಟ್ಟಣ ಸೇರಿದಂತೆ ವಲಯದ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಭಿಷೇಕ ನೆರವೇರಿದವು.
ಶ್ರಾವಣದ ಮೊದಲ ಸೋಮವಾರ ನಿಮಿತ್ತ ಪಟ್ಟಣದ ಬಜಾರ ಬಲಭೀಮ ಸೇನೆ(ಮಾರುತಿ) ದೇವರಿಗೆ ಅರ್ಚಕ ವಿಜಯಾಚಾರ್ಯ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು.
ಇತಿಹಾಸ ಪ್ರಸಿದ್ಧ ಈ ದೇವಸ್ಥಾನದಲ್ಲಿ ಪ್ರತಿವರ್ಷ ಶ್ರಾವಣ ಹಿನ್ನೆಲೆಯಲ್ಲಿ ಶನಿವಾರ, ಸೋಮವಾರ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಅದರಂತೆ ಬೆಳಿಗ್ಗೆ ಕಾಕಡಾರತಿ, ವಾಯಸ್ತುತಿ ಪುನಶ್ಚರಣ, ವಿಷ್ಣು ಸಹಸ್ರನಾಮ, ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಪಟ್ಟಣದ ಭೋಗೇಶ್ವರ ದೇವಸ್ಥಾನ, ರೇವಣಸಿದ್ದೇಶ್ವರ ದೇವಸ್ಥಾನ, ಸಿದ್ದೇಶ್ವರ ದೇವಸ್ಥಾನ ಸೇರಿದಂತೆ ಪುರಾತನ ದೇವಸ್ಥಾನಗಳಲ್ಲಿ ಶ್ರಾವಣ ಮೊದಲನೆ ಸೋಮವಾರ ರುದ್ರಾಭಿಷೇಕ, ಬಿಲ್ವಾರ್ಚನೆ, ಅಲಂಕಾರ, ಪ್ರಸಾದ ವಿತರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.