ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ 60 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ.
ಇದರಲ್ಲಿ ಗುಜರಾತ್‌ನಿಂದ ಬಂದ ಇಬ್ಬರು ದಂಪತಿ ಬಿಟ್ಟರೆ ಉಳಿದೆಲ್ಲ ಪ್ರಕರಣಗಳು ಮಹಾರಾಷ್ಟ್ರದಿಂದ ಹಿಂತಿರುಗಿ ಬಂದ ವಲಸಿಗರ ಕಾರ್ಮಿಕರಲ್ಲೆ ಪತ್ತೆಯಾಗಿದೆ.
15 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲಿವೆ. ಕ್ವಾರಂಟೈನ್ ನಲ್ಲಿ ಇರುವವರಲ್ಲಿಯೇ ಕೊರೊನಾ ಪತ್ತೆಯಾಗಿದೆ. ಕೊರೊನಾ ಸೋಂಕಿತರಲ್ಲಿ ಮಕ್ಕಳು ಸೇರಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ 10 ಮಕ್ಕಳು ಸೇರಿದ್ದಾರೆ. ಈಗಾಗಲೇ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 214 ಸಕ್ರಿಯ ಪ್ರಕರಣಗಳಾಗಿವೆ. 7288 ವರದಿ ಬಾಕಿ ಇವೆ. ಇದು ಮತ್ತಷ್ಟು ಆತಂಕವನ್ನುಂಟು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.