ಯಾದಗಿರಿ: ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ 600ನೇ ಜಯಂತಿ ಅಂಗವಾಗಿ ಅವರ ಕರ್ಮಭೂಮಿ ನೆರೆಯ ಆಂಧ್ರಪ್ರದೇಶದ ಶ್ರೀಶೈಲದಲ್ಲಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷ ಪೂಜೆ ಕೈಕಂರ್ಯಗಳು ನಡೆದವು.
ಅಲ್ಲಿ ಕನ್ನಡಿಗರು ನಿರ್ಮಾಣ ಮಾಡಿರುವ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಗುರುಪಾದಯ್ಯ ಸ್ವಾಮಿ ನೇತೃತ್ವದಲ್ಲಿ ಓಂಕಾರಯ್ಯ ಸ್ವಾಮಿ ಅವರು ಮಲ್ಲಮ್ಮ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ, ಭಕ್ತರಿಗೆ ಮಲ್ಲಮ್ಮಳ ಸಂದೇಶ ತಿಳಿಸಿದರು. ಜಯಂತಿ ಅಂಗವಾಗಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಸಾವಿರಾರು ಭಕ್ತರು ಭೇಟಿ ನೀಡಿ ಮಲ್ಲಮ್ಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.