
ಶಹಾಪುರ: ತಾಲ್ಲೂಕಿನ ಭೀಮರಾಯನಗುಡಿಯ ಸಾಧಕಾಶ್ರಮ ಸಿದ್ಧಾರೂಢ ಮಠದಲ್ಲಿ ಫೆ. 26 ರಿಂದ ಮಾ. 2 ರವರೆಗೆ 5 ದಿನಗಳ ಕಾಲ ಬೀದರ ಸಿದ್ಧಾರೂಢ ಮಠದ ಶಿವಕುಮಾರ ಸ್ವಾಮಿಜಿ ಅವರಿಂದ ವಿಶ್ವಶಾಂತಿಗಾಗಿ 40ನೇ ವರ್ಷದ ಜ್ಞಾನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾತೋಶ್ರೀ ಜ್ಞಾನೇಶ್ವರಿ ದೇವಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 7.30ಕ್ಕೆ ಕಲಬುರಗಿ ಸಿದ್ಧಾರೂಢ ಮಠದ ಮಾತೋಶ್ರೀ ಲಕ್ಷ್ಮೀದೇವಿ ತಾಯಿಯವರು ಆರೂಢ ಧ್ವಜಾರೋಹಣವನ್ನು ನೆರವೇರಿಸುವರು. ಚಳಕಾಪುರದ ಶಂಕರಾನಂದ ಸ್ವಾಮೀಜಿ ಅವರು ವೇದಾಂತ ವೇದಿಕೆಯನ್ನು ಉದ್ಘಾಟಿಸುವರು.
‘ಪ್ರತಿದಿನ ಬೆಳಿಗ್ಗೆ 9.30 ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 6.30 ರಿಂದ ರಾತ್ರಿ 9 ರ ವರೆಗೆ ಶಿವಕುಮಾರ ಸ್ವಾಮಿಜಿ ಅವರ ಸಾನಿಧ್ಯದಲ್ಲಿ ವಿವಿಧ ಮಹಾತ್ಮರ ತತ್ವ ವಿಚಾರಗಳ, ವಚನಗಳನ್ನಾಧರಿಸಿ ಪ್ರವಚನ ಜರುಗಲಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.