ADVERTISEMENT

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 16:30 IST
Last Updated 11 ಡಿಸೆಂಬರ್ 2019, 16:30 IST
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಕ್ರೀಡಾಕೂಟದಲ್ಲಿ ಗುಂಡು ಎಸೆಯುತ್ತಿರುವ ಪೊಲೀಸ್‌ ಸಿಬ್ಬಂದಿ
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಕ್ರೀಡಾಕೂಟದಲ್ಲಿ ಗುಂಡು ಎಸೆಯುತ್ತಿರುವ ಪೊಲೀಸ್‌ ಸಿಬ್ಬಂದಿ   

ಯಾದಗಿರಿ: ಪೊಲೀಸರ ಕಾರ್ಯ ಒತ್ತಡದ ನಡುವೆ ಆರೋಗ್ಯದ ಗಮನ ಹರಿಸುವುದು ಕಷ್ಟ. ಪೊಲೀಸರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ ಎಂದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ ಎಂದರು.

ಎಷ್ಟೇ ಕಾರ್ಯ ಒತ್ತಡವಿದ್ದರೂ ಸೂಕ್ಷ್ಮತೆ, ತಾಳ್ಮೆ ಕಳೆದುಕೊಳ್ಳಬಾರದು. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಪೊಲೀಸ್ ಸಿಬ್ಬಂದಿ ಕರ್ತವ್ಯದ ನಡುವೆ ಬಿಡುವಿನ ವೇಳೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಆರೋಗ್ಯ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾ ಕೂಟದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಋಷಿಕೇಶ ಭಗವಾನ್ ಸೋನವಣೆ , ಡಿವೈಎಸ್‌ಪಿ ಶರಣಪ್ಪ, ಸಿಪಿಐ ಶರಣಗೌಡ ಎಂ,ಎನ್., ನಗರಠಾಣೆ ಪಿಎಸ್‌ಐ ಕೃಷ್ಣ ಸುಬೇದಾರ್ಸೇ ರಿದಂತೆ ಯಾದಗಿರಿ, ಗುರುಮಠಕಲ್, ಶಹಾಪುರ, ಸುರಪುರ ಪೊಲೀಸ್ ಸಿಬ್ಬಂದಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.