ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿಜಾಬ್ ತೆಗೆದಿಡಲು ಪ್ರತ್ಯೇಕ ಕೋಣೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 5:47 IST
Last Updated 28 ಮಾರ್ಚ್ 2022, 5:47 IST
   

ಯಾದಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಆಗಮಿಸಿರುವ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದಿಡಲು ಶಾಲಾವರಣದಲ್ಲಿ ಪ್ರತ್ಯೇಕ ಕೋಣೆ ಮೀಸಲೀಡಲಾಗಿದೆ.

ಸೋಮವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ.

ಈ ಬಾರಿ 10,164 ವಿದ್ಯಾರ್ಥಿಗಳು, 8,492 ವಿದ್ಯಾರ್ಥಿನಿಯರು ಸೇರಿ 18,656 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ADVERTISEMENT

ನಗರ ಸೇರಿದಂತೆ ಜಿಲ್ಲೆಯ 71 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭಕ್ಕೆ ಸಿದ್ಧತೆ ನಡೆದಿದ್ದು, ಕೊಠಡಿ ಸಂಖ್ಯೆ ಪರಿಶೀಲಿಸಿಕೊಂಡು ತೆರಳುತ್ತಿದ್ದಾರೆ.

ಶಹಾಪುರ ತಾಲ್ಲೂಕಿನಲ್ಲಿ 21, ಸುರಪುರ ತಾಲ್ಲೂಕಿನಲ್ಲಿ 18, ಯಾದಗಿರಿ ತಾಲ್ಲೂಕಿನಲ್ಲಿ 32 ಪರೀಕ್ಷಾ ಕೇಂದ್ರಗಳಿವೆ.

ನಗರದ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಬಾಲಕಿಯರ ಪ್ರೌಢಶಾಲೆ, ಚಿರಂಜೀವಿ ಶಾಲೆ, ಉರ್ದು ಪ್ರೌಢಶಾಲೆಗೆ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.

ವಿದ್ಯಾರ್ಥಿಗಳ ಜೊತೆಗೆ ಪೋಷಕರು ಆಗಮಿಸಿದ್ದಾರೆ.‌ ಗೇಟ್ ಮುಂಭಾಗದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ.‌ ಹಾಲ್ ಟಿಕೆಟ್ ಪರಿಶೀಲಿಸಿ ಒಳಗೆ ಬಿಡುತ್ತಿದ್ದಾರೆ.

ಶಾಲಾ ಮುಂಭಾಗದಲ್ಲಿ ಹೆಚ್ಚಿನ ಜನರು ಸೇರಿದಂತೆ ಪೊಲೀಸರು ಜನರನ್ನು ಚದುರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.