ಯಾದಗಿರಿ: ‘ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ, ಕೋವಿಡ್ ಸೋಂಕು ನಿಯಂತ್ರಣಾ ಕಾರ್ಯಕ್ಕೆ ಅಗತ್ಯವಾದ ಕಂದಾಯ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಮೂಲಕ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾಡಳಿತದಿಂದ ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ತಿಳಿಸಿದ್ದಾರೆ.
‘ಅಂತರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುತ್ತಿರುವ ಜನರಿಗೆ ಕೊರೊನಾ ತಪಾಸಣೆಗಾಗಿ ರೈಲು ನಿಲ್ದಾಣ ಹಾಗೂ ಜಿಲ್ಲೆಯಲ್ಲಿ ವಿವಿಧೆಡೆ ಒಟ್ಟು ಎಂಟು ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಚೆಕ್‌ಪೋಸ್ಟ್‌ಗೆ ಕಂದಾಯ ಇಲಾಖೆಯಿಂದ 10 ಜನರಂತೆ ಒಟ್ಟು 80 ಜನ ಸಿಬ್ಬಂದಿ, ರೈಲು ನಿಲ್ದಾಣದಲ್ಲಿ 15 ಜನ ಜಿಬ್ಬಂದಿಯನ್ನು ನಿಯೋಜಿಸಿದ್ದು, ಅವರ ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.
‘ಸೋಂಕು ತಡೆಗೆ ಪ್ರತಿಯೊಬ್ಬರೂ ಸ್ವಯಂ ನಿಗಾವಹಿಸುವುದು, ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಹಕರಿಸುವಂತೆ’ ಅವರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.