ADVERTISEMENT

ಇಂದ್ರಧನುಷ್ ಲಸಿಕಾ ಯಶಸ್ವಿಗೆ ಶ್ರಮಿಸಿ

ಜಿಲ್ಲಾ ಮಟ್ಟದ ಟಾಸ್ಕ್‌ಪೋರ್ಸ್‌ ಸಭೆ, ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 15:30 IST
Last Updated 12 ನವೆಂಬರ್ 2019, 15:30 IST
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಿಷನ್ ಇಂದ್ರಧನುಷ್ ಪೋಸ್ಟರ್‌ ಬಿಡುಗಡೆ ಮಾಡಿದರು
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಿಷನ್ ಇಂದ್ರಧನುಷ್ ಪೋಸ್ಟರ್‌ ಬಿಡುಗಡೆ ಮಾಡಿದರು   

ಯಾದಗಿರಿ: ‘ಜಿಲ್ಲೆಯಾದ್ಯಂತ ಡಿಸೆಂಬರ್ 2 ರಿಂದ 11 ರವರೆಗೆ ಹಮ್ಮಿಕೊಂಡಿರುವ ತೀವ್ರತರದ ಮಿಷನ್ ಇಂದ್ರಧನುಷ್ 2.0 ಹಾಗೂ ಡಿಸೆಂಬರ್ 12 ರಿಂದ ನಡೆಯುವ ಅಂಗನವಾಡಿ ಮತ್ತು ಶಾಲಾ ಮಕ್ಕಳ ಟಿ.ಡಿ, ಡಿ.ಪಿ.ಟಿ. ಮೊದಲನೇ ಸುತ್ತಿನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತೀವ್ರತರದ ಮಿಷನ್ ಇಂದ್ರಧನುಷ್ ನಿರಂತರ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆಯಿಂದ ವಂಚಿತವಾದ ಮಕ್ಕಳು ಮತ್ತು ಗರ್ಭಿಣಿಯರನ್ನು ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಆರೋಗ್ಯ ಸಹಾಯಕಿಯರು ಮನೆ ಮನೆಗೆ ಭೇಟಿ ನೀಡಿ ಸರ್ವೆ ಮೂಲಕ ಗುರುತಿಸಿ ಲಸಿಕೆ ನೀಡಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಡಿಸೆಂಬರ್ 12 ರಿಂದ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಅಭಿಯಾನದಲ್ಲಿ ಡಿ.ಪಿ.ಟಿ. ಹಾಗೂ ಟಿ.ಡಿ. ಲಸಿಕೆಯನ್ನು 5 ರಿಂದ 6 ವರ್ಷದ ಹಾಗೂ 7 ರಿಂದ 16 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ನೀಡಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರ ಸಿಬ್ಬಂದಿ ವರ್ಗದವರು ಇದಕ್ಕೆ ಅಗತ್ಯ ಕ್ರಮ ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ, ಕಲಬುರ್ಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ (ವಿಶ್ವ ಆರೋಗ್ಯ ಸಂಸ್ಥೆ) ಡಾ.ಅನಿಲ್‍ಕುಮಾರ್ ಎಸ್.ತಾಳಿಕೋಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.