ADVERTISEMENT

ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು: ಅಮರ್ ಡೇನಿಯಲ್ ಗೇಬ್ರಿಯನ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 6:53 IST
Last Updated 3 ಜನವರಿ 2026, 6:53 IST
ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಗಣ್ಯರು ಭಾಗವಹಿಸಿದ್ದರು
ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಗಣ್ಯರು ಭಾಗವಹಿಸಿದ್ದರು   

ಸುರಪುರ: ‘ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಜೊತೆಗೆ ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಗಳನ್ನು ಗುರುತಿಸಿಕೊಳ್ಳಬೇಕು’ ಎಂದು ಶಿಕ್ಷಣ ತಜ್ಞ ಅಮರ್ ಡೇನಿಯಲ್ ಗೇಬ್ರಿಯನ್ ಹೇಳಿದರು.

ನಗರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ‘ಅರಿವು ದಾರಿ’ ವಿಷಯದ ಮೇಲೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

‘ಇಂದಿನ ಸ್ಪರ್ಧಾತ್ಮಕ ಯುದಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ. ತಾರ್ಕಿಕ ಮತ್ತು ವಿಶ್ಲೇಷಾತ್ಮಕ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಕೀಳರಿಮೆ ತೊಲಗಿಸಿಕೊಳ್ಳುವುದು, ಸಂದರ್ಶನಕ್ಕೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳುವುದು ಇತರ ವಿಷಯಗಳು ಉದ್ಯೋಗ ಪಡೆಯಲು ನೆರವಾಗುತ್ತವೆ’ ಎಂದರು.

‘ವ್ಯಕ್ತಿತ್ವ ವಿಕಸನಕ್ಕೆ ಪ್ರಾಶಸ್ತ್ಯ ನೀಡಬೇಕು. ಸಮರ್ಪಕವಾಗಿ ಇಂಗ್ಲಿಷ್ ಮಾತನಾಡಲು ಕಲಿಯಬೇಕು. ಸಮರ್ಪಕರಿಗೆ ಖಂಡಿತ ಉದ್ಯೋಗ ದೊರಕುತ್ತದೆ. ಉದ್ಯೋಗ ಪಡೆದುಕೊಳ್ಳುತ್ತೇನೆ ಎಂಬ ಛಲ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಶರಣಬಸಪ್ಪ ಸಾಲಿ ಸ್ವಾಗತಿಸಿದರು. ಉದ್ಯೋಗಾಧಿಕಾರಿ ಮಂಜುನಾಥ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಹತ್ತರಕಿ ನಿರೂಪಿಸಿದರು. ರಾಧಿಕಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.