
ಪ್ರಜಾವಾಣಿ ವಾರ್ತೆ
ಶಹಾಪುರ: ತಾಲ್ಲೂಕಿನ ಭೀಮರಾಯನಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಶರಬಣ್ಣ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 3000 ಮೀ ಓಟದ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಪ್ರಾಚಾರ್ಯ ಗುಂಡೇಕರ್ ರಾಮಚಂದ್ರರಾವ್, ಕ್ರೀಡಾ ಕಾರ್ಯದರ್ಶಿ ದೇವಿಂದ್ರಪ್ಪ ಮಡಿವಾಳಕರ್ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.