ADVERTISEMENT

‘ವೀರಶೈವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಆದ್ಯತೆ’

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 14:31 IST
Last Updated 31 ಜುಲೈ 2024, 14:31 IST
31ಎಸ್ಎಚ್ಪಿ 2: ಶಹಾಪುರ ತಾಲ್ಲೂಕು ಜಂಗಮ ಸಮಾಜದವತಿಯಿಂದ ಬುಧವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಸಿದ್ದಣ್ಣ ಆರಬೋಳ ಅವರನ್ನು ಸನ್ಮಾನಿಸಲಾಯಿತು
31ಎಸ್ಎಚ್ಪಿ 2: ಶಹಾಪುರ ತಾಲ್ಲೂಕು ಜಂಗಮ ಸಮಾಜದವತಿಯಿಂದ ಬುಧವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಸಿದ್ದಣ್ಣ ಆರಬೋಳ ಅವರನ್ನು ಸನ್ಮಾನಿಸಲಾಯಿತು   

ಶಹಾಪುರ: ವೀರಶೈವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಅಗತ್ಯ ಸ್ಥಳವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಸ್ಥಳ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಸಮಾಜಕ್ಕೆ ಕಲ್ಯಾಣ ಮಂಟಪವನ್ನು ಸ್ಥಾಪಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಣ್ಣ ಆರಬೋಳ ಹೇಳಿದರು.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ವೀರಶೈವ ಜಂಗಮ ಸಮುದಾಯದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ಡಾ.ಮಹಾದೇವಯ್ಯ ಕೆಂಭಾವಿ, ಬಸವರಾಜ ಹಿರೇಮಠ, ಚನ್ನಯ್ಯ ಸ್ವಾಮಿ, ಉಪನ್ಯಾಸಕ ಸಿದ್ದಯ್ಯ ಸ್ಥಾವರ ಮಠ, ಮದ್ರಕಿ, ಶೀಲವಂತ ಶಿವಾಚಾರ್ಯ, ವೀರಯ್ಯ ಸ್ವಾಮಿ ವಸ್ತ್ರದ, ಶರಣಯ್ಯ ಸ್ವಾಮಿ ಹಿರೇಮಠ, ಬಸವರಾಜ ಹಿರೇಗೌಡ, ನೀಲಯ್ಯ ಸ್ವಾಮಿ, ಶಿವಕುಮಾರ್ ಗುಬ್ಬಿ, ಸಿದ್ದಯ್ಯ ಹಿರೇಮಠ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.