ADVERTISEMENT

3,000 ವಿದ್ಯಾರ್ಥಿಗಳಿಗೆ 110 ಅತಿಥಿ ಉಪನ್ಯಾಸಕರು; ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 5:57 IST
Last Updated 31 ಡಿಸೆಂಬರ್ 2021, 5:57 IST
ಶಹಾಪುರ ನಗರದ ತಹಶೀಲ ಕಚೇರಿಗೆ ಗುರುವಾರ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿ ಉಪನ್ಯಾಸರ ಕೊರತೆ ನೀಗಿಸುವಂತೆ ಆಗ್ರಹಿಸಿ ತಹಶೀಲ್ದಾರ ಮಧುರಾಜ ಕೂಡ್ಲಿಗಿ ಅವರಿಗೆ ಮನವಿ ಸಲ್ಲಿಸಿದರು
ಶಹಾಪುರ ನಗರದ ತಹಶೀಲ ಕಚೇರಿಗೆ ಗುರುವಾರ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿ ಉಪನ್ಯಾಸರ ಕೊರತೆ ನೀಗಿಸುವಂತೆ ಆಗ್ರಹಿಸಿ ತಹಶೀಲ್ದಾರ ಮಧುರಾಜ ಕೂಡ್ಲಿಗಿ ಅವರಿಗೆ ಮನವಿ ಸಲ್ಲಿಸಿದರು   

ಶಹಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗಿದೆ. ತಕ್ಷಣ ಉಪನ್ಯಾಸ ಕರ ಕೊರತೆಯನ್ನು ನೀಗಿಸಬೇಕು ಎಂದು ಆಗ್ರಹಿಸಿ ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಮಧುರಾಜ ಕೂಡ್ಲಿಗಿ ಅವರಿಗೆ ಮನವಿ ಸಲ್ಲಿಸಿದರು.

ಕಾಲೇಜಿನಲ್ಲಿ ಸುಮಾರು 3,000 ವಿದ್ಯಾರ್ಥಿಗಳು ಇದ್ದಾರೆ. 21 ಖಾಯಂ ಉಪನ್ಯಾಸಕರಿದ್ದು, ಅದರಲ್ಲಿ ಮೂವರು ಎರವಲು ಆಗಿ ಬೇರೆ ಕಡೆ ಕರ್ತವ್ಯಕ್ಕೆ ತೆರಳಿದ್ದಾರೆ. ಕಾಲೇಜಿನಲ್ಲಿ 110 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ADVERTISEMENT

ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ಕರ್ತವ್ಯ ನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸಿ ಬಗೆಹರಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ಸಿಗದ ಸ್ಪಂದನೆ; ಉಪನ್ಯಾಸಕರ ಬೇಸರ

ಶಹಾಪುರ: ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯದ ಅತಿಥಿ ಉಪನ್ಯಾಸಕರು ಸಾಕಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸರ್ಕಾರ ಕೇವಲ ಹಾರಿಕೆ ಉತ್ತರ ನೀಡುತ್ತಲಿದೆ. ಇದು ಅತಿಥಿ ಉಪನ್ಯಾಸಕರಿಗೆ ತೀವ್ರ ಬೇಸರ ಉಂಟು ಮಾಡಿದೆ ಎಂದು ಅತಿಥಿ ಉಪನ್ಯಾಸಕ ರಾಘವೇಂದ್ರ ಹಾರಣಗೇರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.