ಶಹಾಪುರ: ‘ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಮಯ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೇಳಿಕೆಯನ್ನು ಖಂಡಿಸಿ ಮಂಗಳವಾರ ಬಿಜೆಪಿ ಮುಖಂಡರು ರಸ್ತೆಯ ಮೇಲೆ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು
‘ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಅವರು ಸಂವಿಧಾನ ರತ್ನ ಡಾ.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ರಾಜೀನಾಮೆ ಪಡೆಯಬೇಕು’ ಎಂದು ಪಕ್ಷದ ಮುಖಂಡರು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಡೆ ಪ್ರಶ್ನಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಅಲ್ಲದೆ ಟೈರ್‌ಗೆ ಬೆಂಕಿ ಹಚ್ಚಿ ಡಿಕೆಶಿ ಭಾವಚಿತ್ರಗಳನ್ನು ಸುಟ್ಟು ಹಾಕುವ ಮೂಲಕ ಆಕ್ರೋಶ ಹೊರ ಹಾಕಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಗುರು ಕಾಮಾ, ಮಂಡಲ ಅಧ್ಯಕ್ಷ ತಿರುಪತಿ ಹತ್ತಿಕಟಗಿ, ಶಿವರಾಜ ದೇಶಮುಖ, ದೇವು ಕೋನೇರ, ಅಡಿವೆಪ್ಪ ಜಾಕಾ, ಮಲ್ಲಿಕಾರ್ಜುನ ಕಂದಕೂರ, ರಾಘವೇಂದ್ರ ಯಕ್ಷಿಂತಿ, ಪಿಡ್ಡಪ್ಪ, ಅಬ್ದುಲ್ ಹಾದಿಮನಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.