ADVERTISEMENT

ಶಹಾಪುರ: ನೇಣು ಬಿಗಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 1:54 IST
Last Updated 20 ಜನವರಿ 2021, 1:54 IST
ಶರಣಬಸವ
ಶರಣಬಸವ   

ಶಹಾಪುರ: ಪ್ರೇಮಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಸೋಮವಾರ ರಾತ್ರಿ ವಡಗೇರಾ ತಾಲ್ಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ.

ಶರಣಬಸವ ಮೈಲಾರಪ್ಪ (22) ಮತ್ತು ಶೇಖಮ್ಮ ದೇವಿಂದ್ರಪ್ಪ (18) ನೇಣಿಗೆ ಶರಣಾದವರು.

ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಇವರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಯುವತಿ ಯಾದಗಿರಿ ನಗರದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಾಸು ಮಾಡಿದ್ದಳು. ಬಿ.ಎ ಪದವೀಧರನಾಗಿರುವ ಯುವಕಶರಣಬಸವ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ. ಇನ್ನೇನು ಕಾಲೇಜು ಪ್ರಾರಂಭಗೊಳ್ಳುತ್ತಿರುವಾಗ ಶರಣಬಸವ ಗ್ರಾಮಕ್ಕೆ ಬಂದಿದ್ದ. ಅಲ್ಲದೆ ಯುವತಿಯ ಜತೆ ಮಾತುಕತೆ ನಡೆಸಿ ಮದುವೆ ಕುರಿತು ಪ್ರಸ್ತಾಪ ಮಾಡಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಸೋಮವಾರ ಬೆಂಗಳೂರಿನಿಂದ ಬಂದ ಯುವಕ ತನ್ನ ದೊಡ್ಡಮ್ಮಳ ಮನೆಯಲ್ಲಿ ಬಂದು ನೆಲೆಸಿದ್ದ. ರಾತ್ರಿ ಯುವತಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ. ಬೆಳಿಗ್ಗೆ ಮನೆಯ ಬಾಗಿಲು ತೆರೆಯಲು ಹೋದಾಗ ಇಬ್ಬರು ನೇಣಿಗೆ ಶರಣಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನಾವಣೆ, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಶಹಾಪುರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಯ್ಯ ಸಿ.ಹೀರೇಮಠ ಭೇಟಿ ನೀಡಿ ಪರಿಶೀಲಿಸಿದರು.

ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.