ADVERTISEMENT

ಜಾಲಿಬೆಂಚಿ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 16:00 IST
Last Updated 18 ಜೂನ್ 2025, 16:00 IST
ಅಂಬ್ರೇಶ ಮಠಪತಿ
ಅಂಬ್ರೇಶ ಮಠಪತಿ   

ಸುರಪುರ: ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ರೈತ ಅಂಬ್ರೇಶ ರಾಚಯ್ಯ ಮಠಪತಿ (44) ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದು ಎಕರೆ ಜಮೀನು ಇದೆ. ಬ್ಯಾಂಕ್ ಮತ್ತು ಖಾಸಗಿಯವರ ಬಳಿ ₹10 ಲಕ್ಷ ಸಾಲ ಇದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.