ADVERTISEMENT

ಅರೆಕಾಲಿಕ ಕಾನೂನು ಸ್ವಯಂಸೇವಕರ ಹುದ್ದೆಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2023, 15:36 IST
Last Updated 19 ಜುಲೈ 2023, 15:36 IST

ಸುರಪುರ: ರಾಜ್ಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.


ಜನ ಸಮಾನ್ಯರಿಗೆ ತ್ವರಿತ ನ್ಯಾಯದಾನ ಪರಿಕಲ್ಪನೆ ಅಡಿಯಲ್ಲಿ ನ್ಯಾಯಾಂಗ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಈ ನೇಮಕಾತಿ ನಡೆದಿದೆ.

ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂಎಸ್‍ಡಬ್ಲ್ಯು, ಕಾನೂನು ಪದವೀಧರರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ರಾಜಕೀಯೇತರ ಸದಸ್ಯರು, ಎನ್‍ಜಿಒ ಸದಸ್ಯರು, ಸ್ವಸಹಾಯ ಗುಂಪಿನ ಸದಸ್ಯರು ಸೇರಿದಂತೆ ಉತ್ತಮ ನಡತೆಯುಳ್ಳ ವಿದ್ಯಾವಂತರು ಅರ್ಜಿ ಸಲ್ಲಿಸಬಹುದು.

ADVERTISEMENT

ಆಸಕ್ತರು ತಾಲೂಕು ಕಾನೂನು ಸೇವಾ ಸಮಿತಿ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 25 ಸಂಜೆ 5 ಗಂಟೆಯವರೆಗೆ ಕೊನೆ ದಿನವಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.