
ಸುರಪುರ: ‘ಫೆ. 1 ರಂದು ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಗುವುದು. ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು’ ಎಂದು ತಹಶೀಲ್ದಾರ್ ಎಚ್.ಎ. ಸರಕವಾಸ್ ಹೇಳಿದರು.
ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕಾಡಳಿತದ ವತಿಯಿಂದ ಜಯಂತಿ ಆಚರಿಸಲಾಗುವುದು. ಉಪನ್ಯಾಸ ಇರುತ್ತದೆ. ಎಲ್ಲ ಇಲಾಖೆಯ ಅಧಿಕಾರಿಗಳು ಜಯಂತಿಯಲ್ಲಿ ತಪ್ಪದೇ ಪಾಲ್ಗೊಳ್ಳಬೇಕು’ ಎಂದು ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಮಡಿವಾಳ ಸಮಾಜದ ಮುಖಂಡರಾದ ಸಾಯಬಣ್ಣ ಮಡಿವಾಳ, ಚಂದ್ರಶೇಖರ ಗೋಗಿ, ಬಸವರಾಜ ಚಂದನಕೇರಿ, ಬಸವರಾಜ.ಎಚ್, ಮಲ್ಲಿಕಾರ್ಜುನ ಮಡಿವಾಳ, ಸಂತೋಷ ಮಡಿವಾಳ, ಭರತ್ ಮಡಿವಾಳ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.