ADVERTISEMENT

ಸುರಪುರ, ಹುಣಸಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನಿಗದಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 6:29 IST
Last Updated 24 ಜನವರಿ 2021, 6:29 IST

ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ 23 ಹಾಗೂ ಹುಣಸಗಿ ತಾಲ್ಲೂಕಿನ18 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ನಿಗದಿ ಪಡಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‍ನಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ, ಪ್ರಕಟಿಸಿದರು.

ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್‌ ವಿನಯ ಪಾಟೀಲ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.