ಸುರಪುರ: ‘ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಬೇಕು. ಮೊಬೈಲ್‍ನಿಂದ ದೂರವಿರಬೇಕು. ಅಧಿಕಾರಿಯಾದ ನಂತರ ನಾವೆಲ್ಲ ಒಂದೇ ಎನ್ನುವ ಭಾವನೆಯಿಂದ ರಾಷ್ಟ್ರ ಪ್ರೇಮಿಗಳಾಗಬೇಕು’ ಎಂದು ಡಿವೈಎಸ್‍ಪಿ ಜಾವೇದ್ ಇನಾಮದಾರ ಸಲಹೆ ನೀಡಿದರು.
ನಗರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಜ್ಞಾನ ಮಂಥನ’ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಶರಣಬಸಪ್ಪ ನಿಷ್ಠಿ ಮಾತನಾಡಿ, ‘ನಮ್ಮಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಉದ್ಯೋಗಿಗಳಾಗಿದ್ದಾರೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಪ್ರಾಧ್ಯಾಪಕರು ಮಾರ್ಗದರ್ಶನ ಮಾಡಬೇಕು’ ಎಂದು ಹೇಳಿದರು.
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಕಲಬುರಗಿ ವಿಭಾಗೀಯ ನಿರ್ದೇಶಕ ಬಿ. ಶಂಭುಲಿಂಗಪ್ಪ, ಶಾಂತಲಾ ಎಸ್. ನಿಷ್ಠಿ ಮಾತನಾಡಿದರು. ನಿಷ್ಠಿ ಕಡ್ಲೆಪ್ಪನವರ ಮಠದ ಪ್ರಭುಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
2024-25ನೇ ಸಾಲಿನ ಎಂ.ಟೆಕ್ ಎಂಜಿನಿಯರಿಂಗ್, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಗಾಯಕರಾದ ಸುಹಾನಾ ಸೈಯದ್ ಹಾಗೂ ಚನ್ನಪ್ಪ ಹುದ್ದಾರ ಸಿನಿಮಾ ಗೀತೆಗಳನ್ನು ಹಾಡಿ ರಂಜಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಪಿಎಸ್‍ಐಗಳಾದ ಕೃಷ್ಣ ಸುಬೇದಾರ, ಶಿವರಾಜ ಪಾಟೀಲ, ಸ್ಯಾಮ್ಸ ಕಂಪನಿಯ ಮ್ಯಾನೇಜರ್ ಸಂದೀಪ, ಶರಣಗೌಡ ಪಾಟೀಲ ವೇದಿಕೆಯಲ್ಲಿದ್ದರು.
ಪ್ರಾಂಶುಪಾಲ ಶರಣಬಸಪ್ಪ ಸಾಲಿ ಸ್ವಾಗತಿಸಿದರು. ಗಂಗಾಧರ ಹೂಗಾರ ಪರಿಚಯಿಸಿದರು. ಭಾಗ್ಯಶ್ರೀ ದರಬಾರಿ, ಅಭಿಷೇಕ ಕುಲಕರ್ಣಿ, ಅನುಷಾ ಮತ್ತು ವಿಶಾಲ ನಿರೂಪಿಸಿ, ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.