
ಸುರಪುರ: ‘ಕೃಷಿಯೇತರ ಸ್ವ ಉದ್ಯೋಗ ಕೈಗೊಳ್ಳಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಾರಿಗೆ ತಂದಿರುವ ಸಮೃದ್ಧಿ ಸ್ವ-ಉದ್ಯೋಗ ಯೋಜನೆ ನಿರುದ್ಯೋಗಿಗಳಿಗೆ ವರದಾನವಾಗಿದೆ’ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ವಸಂತಗೌಡ ಹೇಳಿದರು.
ನಗರದಲ್ಲಿ ಈಚೆಗೆ ಏರ್ಪಡಿಸಿದ್ದ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಮ್ಮ ಸಂಸ್ಥೆ ಸಿಡ್ಬಿ ಸಂಸ್ಥೆಯೊಡನೆ ಈ ಕುರಿತು ಒಪ್ಪಂದ ಮಾಡಿಕೊಂಡಿದೆ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಮತ್ತು ಜಂಟಿ ಬಾಧ್ಯತಾ ಗುಂಪುಗಳಿಗೆ ಸ್ವ-ಉದ್ಯೋಗ ಕೈಗೊಳ್ಳಲು ನೆರವು ನೀಡಲಾಗುತ್ತಿದೆ’ ಎಂದರು.
‘ಸ್ವ-ಉದ್ಯೋಗ ಕೈಗೊಳ್ಳಲು ಬಯಸುವವರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ. ಅರ್ಹರಿಗೆ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.
‘ಸಣ್ಣ ಮತ್ತು ಮಧ್ಯಮ ವರ್ಗದವರನ್ನು ಸಂಘಟಿಸಿ ಸಬಲೀಕರಣಗೊಳಿಸುವ ಉದ್ದೇಶ ಈ ಯೋಜನೆ ಹೊಂದಿದೆ. ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಕರೆ ನೀಡಿದರು.
ಕ್ಷೇತ್ರ ಯೋಜನಾಧಿಕಾರಿ ನಾಗೇಶ ಎನ್.ಪಿ., ಸಿಡ್ಬಿ ಯೋಜನಾಧಿಕಾರಿ ಜಗದೀಶ, ವಲಯ ಮೇಲ್ವಿಚಾರಕಿ ತ್ರಿವೇಣಿ, ನೋಡಲ್ ಅಧಿಕಾರಿ ಸಿದ್ರಾಮ, ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.