ADVERTISEMENT

‘ಸುರಪುರ: 2018ರಲ್ಲಿ 22,000 ನಕಲಿ ಮತ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:46 IST
Last Updated 16 ಆಗಸ್ಟ್ 2025, 7:46 IST
ಸುರಪುರದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾತನಾಡಿದರು
ಸುರಪುರದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾತನಾಡಿದರು   

ಸುರಪುರ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತಗಳ್ಳತನ ನಡೆಯುವುದು ಮಾರಕವಾಗಿದೆ’ ಎಂದು ರಾಜಾ ವೇಣುಗೋಪಾಲ ನಾಯಕ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯ ವಸಂತ ಮಹಲ್ ನಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಕೇಂದ್ರ ಬಿಜೆಪಿ ಸರ್ಕಾರವು ಸಂವಿಧಾನವನ್ನು ಅಳಿವಿನ ಅಂಚಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತಿದೆ. ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮತವನ್ನು ಹಾಕುವ ಕೆಲಸವನ್ನು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ನಮ್ಮ ತಂದೆ ದಿವಂಗತ ರಾಜಾ ವೆಂಕಟಪ್ಪನಾಯಕರು 2018ರಲ್ಲಿ ಎದುರಿಸಿದ ಚುನಾವಣೆಯಲ್ಲಿ ನಕಲಿ ಮತಗಳು ಮತ್ತು ಮತದಾನಗಳನ್ನು ಡಿಲೀಟ್ ಮಾಡಿರುವುದು ಕಂಡುಬಂದಿದೆ. ಜಿಲ್ಲಾಧಿಕಾರಿಗಳೇ 22,000 ಕೊಟ್ಟಿ ಮತದಾನಗಳಾಗಿವೆ’ ಎಂದು ಹೇಳಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.