ADVERTISEMENT

ಪ್ರಭಾರ ಮುಖ್ಯಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 13:55 IST
Last Updated 19 ಡಿಸೆಂಬರ್ 2018, 13:55 IST

ಯಾದಗಿರಿ: ಜಿಲ್ಲೆಯ ಥಾನುನಾಯ್ಕ ತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷ ಬನ್ನಪ್ಪ ಅವರು ಶಾಲೆಗೆ ನಿರಂತರ ಗೈರಾಗಿರುವುದು ತನಿಖಾ ವರದಿಯಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅವರು ಬುಧವಾರ ಇಲಾಖೆಯ ವಿಚಾರಣೆ ಕಾಯ್ದಿರಿಸಿ, ತತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಥಾನುನಾಯ್ಕ ತಾಂಡಾದಲ್ಲಿನ ಶಾಲೆಗೆ ‘ಪ್ರಜಾವಾಣಿ’ ಭೇಟಿ ನೀಡಿ ‘ಬಾ ಶಿಕ್ಷಕ ಮರಳಿ ಶಾಲೆಗೆ’ ಶೀರ್ಷಿಕೆಯಡಿ ಮಂಗಳವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ವರದಿ ನೋಡಿದ ಡಿಡಿಪಿಐ ಶ್ರೀಶೈಲ ಬಿರಾದಾರ ಕ್ಷೇತ್ರಶಿಕ್ಷಣಾಧಿಕಾರಿ ಅವರಿಂದ ತನಿಖಾ ವರದಿಯ ಪಡೆದು, ಅದರ ಆಧಾರದ ಮೇಲೆ ಅಮಾನತುಗೊಳಿಸಿದ್ದಾರೆ.

ಸಹ ಶಿಕ್ಷಕರ ಜತೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿ ಶಾಲೆಯಲ್ಲಿ ತತಕ್ಷಣ ತರಗತಿ ಬೋಧನೆ ನಡೆಯುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಶ್ರೀಶೈಲ ಬಿರಾದಾರ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.