ನಾರಾಯಣಪುರ : ಸಮೀಪದ ಅಮ್ಮಾಪುರ ಎಸ್. ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಅಚ್ಚಪ್ಪಗೌಡ, ‘ಎಲ್ಲ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಗ್ರಾಮಕ್ಕೆ ಗೌರವ ತರಬೇಕು. ಪ್ರತಿಯೊಬ್ಬರು ದೇಶದ ಒಳ್ಳೆಯ ಪ್ರಜೆಯಾಗಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.