ADVERTISEMENT

ಪ್ರತಿಭಾ ಕಾರಂಜಿ: ಗಮನಸೆಳೆದ ಆಟಗಳು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 15:31 IST
Last Updated 14 ಸೆಪ್ಟೆಂಬರ್ 2024, 15:31 IST
ಕೆಂಭಾವಿ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕೆಂಭಾವಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಚನ್ನಬಸವ ಶಿವಾಚಾರ್ಯರು ವಿವಿಧ ಛದ್ಮವೇಷ ಧರಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು
ಕೆಂಭಾವಿ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕೆಂಭಾವಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಚನ್ನಬಸವ ಶಿವಾಚಾರ್ಯರು ವಿವಿಧ ಛದ್ಮವೇಷ ಧರಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು   

ಕೆಂಭಾವಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಬಿ. ಎನ್. ರೋಡಲಬಂಡಿ ಹೇಳಿದರು.

ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸುರಪುರ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಕೆಂಭಾವಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಕೆಂಭಾವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಭೆ ಯಾರೂ ಸ್ವತ್ತೂ ಅಲ್ಲ. ಪ್ರತಿ ವರ್ಷ ಸರ್ಕಾರ ಮಕ್ಕಳಿಗಾಗಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮತ್ತಷ್ಟು ಉತ್ತೇಜನ ನೀಡುತ್ತಿದೆ’ ಎಂದು ಹೇಳಿದರು.

ADVERTISEMENT

ನಂತರ ಪಟ್ಟಣದ ವಿವಿಧ ಸರ್ಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳಿಂದ ಹಲವು ಕಾರ್ಯಕ್ರಮಗಳು ಜರುಗಿದವು. ಬಾಲಕರ ಸರ್ಕಾರಿ ಶಾಲೆಯ ಮಕ್ಕಳ ಡೊಳ್ಳು ಕುಣಿತ ಮತ್ತು ಸಂಜೀವನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯ ಕಾಂತಾರ ಚಲನಚಿತ್ರ ದೈವ ಛದ್ಮವೇಷ ಎಲ್ಲರ ಗಮನ ಸೆಳೆಯಿತು.

ಶಿಕ್ಷಕ ಶ್ರೀಶೈಲ ಪಾಸೋಡಿ ಪ್ರಾಸ್ತಾವಿಕ ಮಾತನಾಡಿದರು. ಹಿರೇಮಠದ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶರಣಬಸ್ಸು ಡಿಗ್ಗಾವಿ ಅಧ್ಯಕ್ಷತೆ ವಹಿಸಿದ್ದರು. ಮೋಹನರೆಡ್ಡಿ ಡಿಗ್ಗಾವಿ, ಬಸಮ್ಮ ಗುಂಡಕನಾಳ, ಸಿಆರ್‌ಪಿ ಈರಯ್ಯ ಹಿರೇಮಠ, ಶರಣಗೌಡ ಬಿರಾದಾರ, ಬಸವರಾಜ ಭಂಟನೂರ, ಮಲ್ಲಿಕಾರ್ಜುನ ಖರ್ಗೆ, ಅಶೋಕ ಭಂಗ ಇದ್ದರು. ಬಸವರಾಜ ಆವಟಿ ನಿರೂಪಿಸಿದರು, ರಾಜಅಹ್ಮದ ಸ್ವಾಗತಿಸಿದರು, ಶ್ರೀಶೈಲ್ ಕಲಬುರಗಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.