ಯಾದಗಿರಿ: ಶಿಕ್ಷಕರು ಶಿಲ್ಪಿಗಳಂತೆ ವಿದ್ಯಾರ್ಥಿಗಳ ಜೀವನ ರೂಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಸಲಹೆ ನೀಡಿದರು.
ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಜಿ.ಪಂ., ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ, ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆ ಕೊನೆಯ ಸ್ಥಾನ ಬರುತ್ತಿದೆ. ಇದು ಶಿಕ್ಷಣದ ಅಭಿವೃದ್ಧಿಗೆ ಪೂರಕವಲ್ಲ. ಶಿಕ್ಷಕರು ಮಕ್ಕಳ ಗುಣಮಟ್ಟ ತಿಳಿದು ಬೋಧಿಸುವುದು ಅವರ ಕರ್ತವ್ಯ ಎಂದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಶಿಕ್ಷಕರಿಗೆ ಇರುವ ಗೌರವ ದೇಶದ ಯಾವ ನೌಕರರಿಗೂ ಇಲ್ಲ. ಶಿಕ್ಷಕರು ಪೋಷಕಗಿಂತ ಹೆಚ್ಚಾಗಿ ಮಕ್ಕಳ ಜೀವನ ರೂಪಿಸುವಂತಹ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರಿಗೆ ಇದೆ. ಹೀಗಾಗಿ ಉತ್ತಮ ಮಕ್ಕಳನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯನ್ಮೋಖರಾಗಿ’ ಎಂದು ಸಲಹೆ ನೀಡಿದರು.
ಜಿ.ಪಂ. ಸಿಇಒ ಅಮರೇಶ .ಆರ್ ನಾಯ್ಕ, ಡಿಡಿಪಿಐ ಶಾಂತಗೌಡ ಪಾಟೀಲ ಮಾತನಾಡಿದರು.
ರಾಜ್ಯ ಅಲೆ ಮಾರಿ-ಅರೆ ಅಲೆಮಾರಿ ಅಧ್ಯಕ್ಷ ದೇವಿಂದ್ರನಾಥ ನಾದ್, ನಗರಸಭೆ ಅಧ್ಯಕ್ಷ ಸುರೇಶ ಅಂಬೀಗರ್, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ, ಕರ್ನಾಟಕ ರಾಜ್ಯ ಪ್ರೌಢ ಶಾಲೆ ಸಾರ್ವಜನಿಕ ಶಿಕ್ಷಣ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಕುಮಾರ ಕೆಂಭಾವಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಶಿಕ್ಷಕರಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಯಾದಗಿರಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರೌಢ ಶಾಲೆಶಿಕ್ಷಕರಸಂಘ ಅಧ್ಯಕ್ಷ ಶರಣಗೌಡ ಭೀಮನಹಳ್ಳಿ, ಯಾದಗಿರಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಶಿಕ್ಷಕರಸಂಘ ಅಧ್ಯಕ್ಷ ಯಂಕಪ್ಪ ದೊಡ್ಮನಿ ಡಿ.ಎಂ. ಹೊಸಮನಿ ಸೇರಿದಂತೆ ವಿವಿಧ ತಾಲ್ಲೂಕುಗಳಿಂದ ಶಿಕ್ಷಕರು ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.