ADVERTISEMENT

ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ: ಭಕ್ತರಿಗೆ ದರ್ಶನ ಭಾಗ್ಯ

4 ತಿಂಗಳಿನಿಂದ ಬಂದ್‌ ಆಗಿದ್ದ ದೇವಸ್ಥಾನ, ಇಂದಿನಿಂದ ದರ್ಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 16:39 IST
Last Updated 14 ಆಗಸ್ಟ್ 2020, 16:39 IST
ಶ್ರೀಶೈಲ ಮಲ್ಲಿಕಾರ್ಜುನ ದೇಗುಲ
ಶ್ರೀಶೈಲ ಮಲ್ಲಿಕಾರ್ಜುನ ದೇಗುಲ   

ಯಾದಗಿರಿ: ಕಳೆದ 4 ತಿಂಗಳಿನಿಂದ ಕೊರೊನಾ ವೈರಸ್‌ಹಾವಳಿಯಿಂದದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ನೆರೆಯ ಆಂಧ್ರಪ್ರದೇಶದ ಕರ್ನೂಲ್‌ಜಿಲ್ಲೆಯ ಶ್ರೀಶೈಲಂ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನವನ್ನು ಮುಚ್ಚಲಾಗಿತ್ತು. ಆದರೆ, ದೇವಸ್ಥಾನ ಆಡಳಿತ ಮಂಡಳಿ ಶುಕ್ರವಾರ ದೇವಸ್ಥಾನವನ್ನು ಸಂಪೂರ್ಣ ಸ್ಯಾನಿಟೈಸ್‌ಮಾಡಿ ಶನಿವಾರ ಬೆಳಿಗ್ಗೆಯಿಂದ ಭಕ್ತರು ದರ್ಶನ ಪಡೆಯಲು ಅವಕಾಶ ಕಲ್ಪಿಸಿದೆ.

ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾಗಿದೆ. ಈವೇಳೆಕರ್ನಾಟಕ ಸೇರಿದಂತೆ ದೇಶದವಿವಿಧಭಾಗಗಳಿಂದ ಜನರು ಶ್ರೀಶೈಲಂಗೆ ಭೇಟಿ ನೀಡುತ್ತಾರೆ.ಸಪ್ತ ನದಿಗಳ ಸಂಗಮ ಪಾತಾಳಗಂಗೆಯಲ್ಲಿ ಪುಣ್ಯಸ್ನಾನ ಮಾಡಿ ಸಾಕ್ಷಿ ಗಣಪತಿ, ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಶಿಖರೇಶ್ವರ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ತೆರಳಿ, ದರ್ಶನ ಪಡೆಯುತ್ತಾರೆ. ನಂತರಶ್ರೀಶೈಲಂ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ತೆಗೆದುಕೊಂಡು ತೆರಳುತ್ತಾರೆ ಎಂದು ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT