ADVERTISEMENT

ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:53 IST
Last Updated 23 ನವೆಂಬರ್ 2020, 16:53 IST

ಯಾದಗಿರಿ: ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಹೆಚ್ಚುವರಿ ಆರು ಕೋಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸೋಮವಾರ ಉದ್ಘಾಟಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಕೋವಿಡ್ ವಾರ್ ರೂಂ ಉದ್ಘಾಟಿಸಿದರು. ನಂತರ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ 5 ಕೊಠಡಿಗಳನ್ನು ಉದ್ಘಾಟಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ, ಜಿಲಾಧಿಕಾರಿ ಡಾ.ರಾಗಪ್ರಿಯಾ ಆರ್., ಹೆಚ್ಚುವರಿ ಜಿಲಾಧಿಕಾರಿ ಪ್ರಕಾಶ.ಜಿ ರಜಪೂತ, ಡಿಎಚ್‌ಒ ಡಾ.ಇಂದುಮತಿ ಕಾಮಶೆಟ್ಟಿ ಪಾಟೀಲ, ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ, ಜಿಲ್ಲಾ ‍ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ, ಯೂಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.