ಯಾದಗಿರಿ: ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನುಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ವರ್ಕನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಉಮಾದೇವಿ (35)ಕೊಲೆಯಾದ ಮಹಿಳೆ.ವರ್ಕನಳ್ಳಿ ಗ್ರಾಮದ ಬಾವಸಾಬ್ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಉಮಾದೇವಿ ಜೊತೆ ಬಾವಸಾಬ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗುತ್ತಿದೆ.15 ವರ್ಷಗಳ ಹಿಂದೆಮದುವೆಯಾಗಿದ್ದ ಉಮಾದೇವಿ, ಪತಿಯಿಂದ ದೂರವಾಗಿ ಬಾವಸಾಬ್ ಜೊತೆಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇತ್ತ ಬಾವಸಾಬ್‌ಗೂ ವಿವಾಹವಾಗಿದ್ದರೂ ಉಮಾದೇವಿ ಜೊತೆ ವಿವಾಹೇತರ ಸಂಬಂಧ ಬೆಳೆಸಿದ್ದ. ಇವರಿಬ್ಬರ ಮಧ್ಯೆ ಮನಸ್ತಾಪ ಮೂಡಿದ್ದು, ಈ ಕೊಲೆಗೆ ಕಾರಣ ಅಂತ ಹೇಳಲಾಗುತ್ತಿದೆ. ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.