ಡಾ.ಜಿ.ಪರಮೇಶ್ವರ
ಯಾದಗಿರಿ: ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್ ಕೊಟ್ಟಿದ್ದು, ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸೋಮವಾರ ನಗರದಲ್ಲಿ ಯಾದಗಿರಿ ನಗರ ಪೊಲೀಸ್ ಠಾಣೆ ಉದ್ಘಾಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇ.ಡಿಯವರು ಏನು ಅಪೇಕ್ಷೆ ಪಡುತ್ತಾರೆ ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ಕಾನೂನಿನ ಬಗ್ಗೆ ಮಾತಾಡಲು ನಮಗೆ ಅರ್ಹತೆಯಿಲ್ಲ. ಇ.ಡಿ ನೋಟಿಸ್ ಸೇರಿದಂತೆ ಬೇರೆ ಬೇರೆ ಸಂಸ್ಥೆಗಳಿಂದ ತನಿಖೆ ನಡೆಯುತ್ತಿದೆ. ಇದರ ಬಗ್ಗೆ ಏನೂ ಮಾತನಾಡಲು ಆಗಲ್ಲ. ಇದು ರಾಜಕೀಯ ಪ್ರೇರಿತ ಎಂದು ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಡಾ ಪ್ರಕರಣ ರಾಜಕೀಯ ಪ್ರೇರಿತ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ಹೀಗಾಗಿ ಈಗಲೂ ಅದನ್ನು ಹೇಳುತ್ತೇವೆ’ ಎಂದರು.
‘ಆ ನಿವೇಶನಗಳ ಮೌಲ್ಯ ₹ 300 ಕೋಟಿಯಷ್ಟು ಆಗಬಹುದು ಅಂತ ಹೇಳಲಾಗಿದೆ. 70–80 ಜನರ ಪಟ್ಟಿ ಮಾಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯವರ ಹೆಸರಿದೆಯಾ? ಅವರ ಪತ್ನಿ ಹೆಸರಿದೆಯಾ ಏನೂ ಮಾಹಿತಿ ಇಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.