ADVERTISEMENT

ಯಾದಗಿರಿ: ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ, ಮೂವರು ಕಾನ್‌ಸ್ಟೇಬಲ್ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 9:07 IST
Last Updated 19 ಆಗಸ್ಟ್ 2021, 9:07 IST
ಯಾದಗಿರಿಯ ಅಂಬೇಡ್ಕರ್ ವೃತ್ತದ ಬಳಿ ಜನಾಶೀರ್ವಾದ ಯಾತ್ರೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ಬೈಕ್ ರ್ಯಾಲಿ
ಯಾದಗಿರಿಯ ಅಂಬೇಡ್ಕರ್ ವೃತ್ತದ ಬಳಿ ಜನಾಶೀರ್ವಾದ ಯಾತ್ರೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ಬೈಕ್ ರ್ಯಾಲಿ   

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ‌ ಮೇಲೆ ಮೂವರು ಕಾನ್‌ಸ್ಟೇಬಲ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇ‌ದಮೂರ್ತಿ ಅಮಾನತು ಮಾಡಿದ್ದಾರೆ.

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ವಿರೇಶ, ಸಂತೋಷ ಮತ್ತು ಮೆಹಬೂಬ್ ಅಮಾನತುಗೊಂಡವರು.

'ಜನಾಶೀರ್ವಾದ ಯಾತ್ರೆಯಲ್ಲಿ ಹೆಚ್ಚು ಜನ ಸೇರದಂತೆ ಬಂದೊಬಸ್ತ್‌ಗಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಅಲ್ಲಿದ್ದ ಪೊಲೀಸರು ಮದ್ದು ಹಾರಿಸುವುದನ್ನು ತಡೆದಿಲ್ಲ. ಬಂದೂಕುಗಳನ್ನು ವಶಪಡಿಸಿಕೊಂಡಿಲ್ಲ. ಕರ್ತವ್ಯ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ' ಎಸ್ಪಿ ತಿಳಿಸಿದ್ದಾರೆ.

ADVERTISEMENT

'ಯಾದಗಿರಿ ನಗರದಲ್ಲಿ ನಡೆದ ಬೈಕ್ ರ್ಯಾಲಿಗೆ ಯಾವುದೇ ಅನುಮತಿ ನೀಡಿರಲಿಲ್ಲ. ಕಾರ್ಯಕ್ರಮ ಅಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.