ADVERTISEMENT

ತಿಪ್ಪನಟಗಿ ಗ್ರಾಮದ ವಾಂತಿ ಭೇದಿ ಪ್ರಕರಣ | ಸಾವಿಗೆ ಕಲುಷಿತ ನೀರು ಕಾರಣವಲ್ಲ: ವರದಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 20:24 IST
Last Updated 8 ಜುಲೈ 2025, 20:24 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣದ ಪ್ರಯೋಗಾಲಯದ ವರದಿ ಬಂದಿದ್ದು, ಮೂವರ ಸಾವಿಗೆ ಕಲುಷಿತ ನೀರು ಕಾರಣವಲ್ಲ ಎಂದು ಟಿಎಚ್‌ಒ ಡಾ.ಆರ್‌.ವಿ.ನಾಯಕ ತಿಳಿಸಿದ್ದಾರೆ.

ADVERTISEMENT

ಗ್ರಾಮದಲ್ಲಿ ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿದ್ದು, ಮಂಗಳವಾರ 8 ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಇಬ್ಬರನ್ನು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿದ್ದು, ಮುಂಜಾಗ್ರತೆ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಸಿಇಒ ಭೇಟಿ: ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್‌ ಒರಡಿಯಾ ಭೇಟಿ ನೀಡಿದ್ದು, ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.