ADVERTISEMENT

ಯಾದಗಿರಿ: ಜಿಲ್ಲೆಯಿಂದ ಬಸ್‌ಗಳ ಓಡಾಟ

​ಪ್ರಜಾವಾಣಿ ವಾರ್ತೆ
Published 5 ಮೇ 2020, 10:11 IST
Last Updated 5 ಮೇ 2020, 10:11 IST
ಯಾದಗಿರಿಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಬಸ್‌ ಪ್ರಯಾಣಿಕರು ಅಂತರ ಕಾಪಾಡಿಕೊಂಡಿರುವುದು
ಯಾದಗಿರಿಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಬಸ್‌ ಪ್ರಯಾಣಿಕರು ಅಂತರ ಕಾಪಾಡಿಕೊಂಡಿರುವುದು   

ಯಾದಗಿರಿ: ಹಸಿರು ವಲಯದಲ್ಲಿ ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರದಿಂದ ಬಸ್‌ ಸಂಚಾರ ಆರಂಭಿಸಲಾಗಿದೆ.ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲಾ ಸಾರಿಗೆ ಸಂಸ್ಥೆ ಜಿಲ್ಲಾ ಕೇಂದ್ರದಿಂದ ಸುರಪುರ, ಶಹಾಪುರ, ಸೇರಿದಂತೆ ಗುರಮಠಕಲ್ ತಾಲ್ಲೂಕು ಕೇಂದ್ರಗಳಿಗೆ ಪ್ರಯಾಣಿಕರು ಸಂಚರಿಸಲು ಬಸ್ ವ್ಯವಸ್ಥೆ ಕಲ್ಪಿಸಿದೆ.

ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್‌ಧರಿಸಿದರೆ ಮಾತ್ರ ಬಸ್‌‌ನಲ್ಲಿ ಪ್ರವೇಶ ನೀಡಲಾಗುತ್ತಿದೆ. ಪ್ರಯಾಣಿಕರಿಗೆ ಸ್ಯಾನಿಟೈಸರ್‌ನಿಂದ ಹ್ಯಾಂಡ್ ವಾಶ್ ಕೂಡ ಕಡ್ಡಾಯಗೊಳಿಸಿದ್ದು, ಒಂದು ಬಸ್‌ನಲ್ಲಿ ಕೇವಲ 30 ಪ್ರಯಾಣಿಕರಷ್ಟೇ ಸಂಚರಿಸುವ ವ್ಯವಸ್ಥೆ ಮಾಡಿದ್ದು, ಅಂತರಕ್ಕೂ ಮಹತ್ವ ನೀಡಲಾಗಿದೆ.

ಥರ್ಮಲ್‌ ಸ್ಕ್ಯಾನಿಂಗ್‌

ADVERTISEMENT

ಬಸ್‌ ಪ್ರಯಾಣಕ್ಕೂ ಮುನ್ನ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುತ್ತಿದೆ. ಆನಂತರ ಅವರ ವಿವರಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ನಂತರವೇ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತಿದೆ. ಬಸ್‌ ನಿಲ್ದಾಣಗಳಲ್ಲಿರುವ ಕುರ್ಚಿಗಳಲ್ಲಿ ಅಂತರ ಕಾಪಾಡಿಕೊಳ್ಳಲು ಗುರುತು ಹಾಕಲಾಗಿದೆ. ಅಲ್ಲದೆ ಮೂವರು ಕುಳಿತುಕೊಳ್ಳುವ ಸೀಟಿನಲ್ಲಿ ಇಬ್ಬರಿಗೆ,ಇಬ್ಬರು ಕುಳಿತು ಕೊಳ್ಳುವ ಸೀಟಿನಲ್ಲಿ ಒಬ್ಬರಿಗೆ ಅವಕಾಶ ನೀಡಲಾಗಿದೆ. ಸೋಮವಾರ ಸುಮಾರು 20 ಬಸ್‌ಗಳು ಕಾರ್ಯಾಚರಣೆ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.