ADVERTISEMENT

ಯಾದಗಿರಿ ಜಿಲ್ಲೆಯಲ್ಲಿ ಒಂದೇ ದಿನ 25 ಜನರ ವಿರುದ್ಧ ಪೋಕ್ಸೊ ಕೇಸ್ ದಾಖಲು!

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:35 IST
Last Updated 13 ಫೆಬ್ರುವರಿ 2026, 7:35 IST
<div class="paragraphs"><p>ಪೋಕ್ಸೊ </p></div>

ಪೋಕ್ಸೊ

   

ಯಾದಗಿರಿ: ಬಾಲಕಿಯ ಅಪಹರಣ ಮತ್ತು ಬಾಲಕಿಯರನ್ನು ಮದುವೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಆರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದೇ ದಿನ (ಫೆ.11) 25 ಮಂದಿ ವಿರುದ್ಧ ಪೋಕ್ಸೊ ಪ್ರಕರಣಗಳು ದಾಖಲಾಗಿವೆ.

ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 16 ವರ್ಷದ ಬಾಲಕಿಯನ್ನು ಅಪಹರಿಸಿ, ಮರಳಿ ಬಿಟ್ಟು ಹೋದ ಆರೋಪದಡಿ ಬುಗ್ಗಪ್ಪ ದುಗನೂರು ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ADVERTISEMENT

ಯಾದಗಿರಿ ತಾಲ್ಲೂಕಿನ ಗ್ರಾಮವೊಂದರ 15 ವರ್ಷದ ಬಾಲಕಿಯನ್ನು ಮದುವೆಯಾದ ಆರೋಪದಡಿ ಪತಿ, ಬಾಲಕಿಯ ಅತ್ತೆ, ಮಾವ, ಆಕೆಯ ತಾಯಿ ಮತ್ತು ತಂದೆ ವಿರುದ್ಧ‌ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯವಿವಾಹ ನಿಷೇಧ ಹಾಗೂ ಪೋಕ್ಸೊ ಪ್ರಕರಣ ದಾಖಲಾಗಿದೆ.

ಹುಣಸಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮದುವೆ ಮಾಡಿದ ಆರೋಪದಡಿ ಆಕೆಯ ಗಂಡ, ತಾಯಿ, ಮಾವ ಹಾಗೂ ಅತ್ತೆ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಕೊಡೇಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷ, 17 ವರ್ಷ ಹಾಗೂ 18 ವರ್ಷದ ಬಾಲಕಿಯರನ್ನು ಮದುವೆ ಮಾಡಿದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ತಲಾ ಐವರ ವಿರುದ್ಧ ಕೇಸ್ ದಾಖಲಾಗಿದೆ. ಸಂತ್ರಸ್ತೆಯರ ಗಂಡ, ತಾಯಿ, ತಂದೆ, ಅತ್ತೆ ಹಾಗೂ ಮಾವನ ವಿರುದ್ಧ ದೂರು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.