ಗುರುಮಠಕಲ್: ಲಾರಿ ಹಾಯ್ದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಪಸಪೂಲ-ಗಣಾಪುರ ಗ್ರಾಮಗಳ ನಡುವಿನ ರಾಜ್ಯ ಹೆದ್ಧಾರಿ-16 ರಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ತಾಲ್ಲೂಕಿನ ಶಿವಪುರ ಗ್ರಾಮದ ಗಂಗಪ್ಪ ಶರಣಪ್ಪ ಸುರನೋಳ(38) ಎಂದು ಗುರುತಿಸಲಾಗಿದೆ.
ತೆಲಂಗಾಣ ರಾಜ್ಯದ ಭೈರಂಕೊಂಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ದೇವರ ಕಾರ್ಯವೊಂದಕ್ಕೆ ಅಲ್ಲಿಗೆ ಹೋಗಿ ಹಿಂತಿರುಗುವ ವೇಳೆ ಘಟನೆ ಸಂಭವಿಸಿದೆ.
ಯಾದಗಿರಿಯಿಂದ ಹೈದರಾಬಾದ್ ನಗರಕ್ಕೆ ತೆರಳುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗಂಗಪ್ಪ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಹಿಂಬದಿಯಿಂದ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಆಂಧ್ರಪ್ರದೇಶದ ಬೇತಂಚರ್ಲಾ ಮೂಲದ ಲಾರಿ ಚಾಲಕ ಹರಿನಾಥರೆಡ್ಡಿ ವಿರುದ್ಧ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.