ಯಾದಗಿರಿ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಯ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ನಡೆ ಖಂಡನೀಯ ಎಂದು ಬಿಜೆಪಿ ಮುಖಂಡ ಮಹೇಶರೆಡ್ಡಿ ಮುದ್ನಾಳ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಾಂವಿಧಾನಿಕ ಹುದ್ದೆಯಲ್ಲಿ ಇರುವ ನಾಯಕನಿಗೆ ಅವಮಾನ ಮಾಡಿದೆ. ಉದ್ದೇಶಪೂರ್ವಕವಾಗಿ ರಾಜಕಾರಣ ಮಾಡಲು ಇಂತಹ ಕೆಲಸಕ್ಕೆ ಮುಂದಾಗಿದೆ. ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
ಪ್ರತಿಪಕ್ಷದ ನಾಯಕನಿಗೆ ಅವಮಾನ ಮಾಡುವ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಸ್ಥಿತಿ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.