
ಶಹಾಪುರ ನಗರದ ಐಡಿಎಸ್ ಎಂಟಿ ಪ್ರದೇಶಕ್ಕೆ ಶನಿವಾರ ಸಚಿವರು ಭೇಟಿ ನೀಡಿ ಪರಿಶೀಲಿಸಿದರು
ಶಹಾಪುರ: ನಗರದ ಸಣ್ಣ ಮತ್ತು ಪಟ್ಟಣ ಅಭಿವೃದ್ಧಿ ಯೋಜನೆ(ಐಡಿಎಸ್‌ಎಂಟಿ) ಪ್ರದೇಶಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ ನೀಡಿ, ಹೊಸದಾಗಿ ನಿರ್ಮಾಣ ಆಗುತ್ತಿರುವ 41 ನಿವೇಶನಗಳನ್ನು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ‘ಹಲವು ವರ್ಷಗಳ ಹಿಂದೆ ಸ್ವಾಧೀನ ಪಡಿಸಿಕೊಂಡಿದ್ದ ಎರಡು ಎಕರೆ ಜಮೀನು ಉಳಿದುಕೊಂಡಿತ್ತು. ಅದನ್ನು ಪತ್ತೆ ಹಚ್ಚಿ ನಗರ ಯೋಜನಾ ಪ್ರಾಧಿಕಾರದಿಂದ ನೀಲನಕ್ಷೆ ಸಿದ್ಧಪಡಿಸಿ, 41 ಹೊಸದಾಗಿ ನಿವೇಶನ ನಿರ್ಮಿಸಲಾಗುತ್ತಿದೆ. ಅಗತ್ಯ ಸೌಲಭ್ಯಗಳಾದ ಚರಂಡಿ, ವಿದ್ಯುತ್, ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಹಳ್ಳ ದಾಟಿ ಹೋಗಲು ಸೇತುವೆ ನಿರ್ಮಾಣಕ್ಕೆ ₹ 30 ಅನುದಾನವನ್ನು ನಗರೋತ್ಥಾನ ಯೋಜನೆ ಅಡಿಯಲ್ಲಿ ನೀಡಲಾಗುವುದು’ ಎಂದು ಹೇಳಿದರು.
ನಗರ ಆಶ್ರಯ ಸಮಿತಿ ಅಧ್ಯಕ್ಷ, ವಸಂತ ಸುರಪುರಕರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಆರಬೋಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.