ADVERTISEMENT

ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ: ಶಾಸಕ ವೆಂಕಟರೆಡ್ಡಿ ಮುದ್ನಾಳ ಸಲಹೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 4:44 IST
Last Updated 24 ಜುಲೈ 2021, 4:44 IST
ಯಾದಗಿರಿಯ ವಾರ್ಡ್‌ ಸಂಖ್ಯೆ 9 ರಲ್ಲಿ ಕಾರ್ಮಿಕರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿದರು
ಯಾದಗಿರಿಯ ವಾರ್ಡ್‌ ಸಂಖ್ಯೆ 9 ರಲ್ಲಿ ಕಾರ್ಮಿಕರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿದರು   

ಯಾದಗಿರಿ: ಕಾರ್ಮಿಕರು ಸರ್ಕಾರದ ಯೋಜನೆಗಳ ಲಾಭ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ವಾರ್ಡ್‌ ಸಂಖ್ಯೆ 9ರಲ್ಲಿ ಕಾರ್ಮಿಕ ಇಲಾಖೆಯಿಂದ 350 ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಡ ಕಾರ್ಮಿಕರಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.

ಈಚೆಗೆ ಜಿಲ್ಲೆಯ ಕಾರ್ಮಿಕ ಇಲಾಖೆ ಅಧಿಕಾರಿ ಶ್ವೇತಾ, ಜಿಲ್ಲೆಯಾದ್ಯಂತ ಕಾರ್ಮಿಕರನ್ನು ಗುರುತಿಸಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಶಾಸಕರ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ADVERTISEMENT

ಕಾರ್ಮಿಕ ಇಲಾಖೆ ಅಧಿಕಾರಿ ಶ್ವೇತಾ ಮಾತನಾಡಿ, ಕಾರ್ಮಿಕರಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಲಾಭ ಪ್ರತಿಯೊಬ್ಬ ಕಾರ್ಮಿಕರು ಪಡೆಯಬೇಕು ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಉಪಾಧ್ಯಕ್ಷೆಪ್ರಭಾವತಿ ಮಾರುತಿ ಕಲಾಲ್, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಸದಸ್ಯ ಚನ್ನಕೇಶವ ಬಾಣತಿಹಾಳ, ನಾಗಪ್ಪ ಬೆನಕಲ್, ಮಹಾದೇವಪ್ಪ ಯಲಸತ್ತಿ, ಶಂಕರ ಗೋಸಿ, ನಾಗಪ್ಪ ಬೆನಕಲ್, ನಾಗರಾಜ ಬಿರನೂರ, ಪೀರ್ ಅಹ್ಮದ್ ಇದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.