ADVERTISEMENT

ಸೋಂಕು ತಡೆಗೆ ಲಸಿಕೆ ಪರಿಣಾಮಕಾರಿ: ಶರಣಬಸಪ್ಪ ದರ್ಶನಾಪುರ

‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 5:49 IST
Last Updated 5 ಜೂನ್ 2021, 5:49 IST
ಶಹಾಪುರ ನಗರದ ತಹಶೀಲ ಕಚೇರಿಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಶರಣಬಸಪ್ಪ ದರ್ಶನಾಪುರ ಚಾಲನೆ ನೀಡಿದರು
ಶಹಾಪುರ ನಗರದ ತಹಶೀಲ ಕಚೇರಿಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಶರಣಬಸಪ್ಪ ದರ್ಶನಾಪುರ ಚಾಲನೆ ನೀಡಿದರು   

ಶಹಾಪುರ: ಕೊರೊನಾ ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರ ಪ್ರತಿಯೊಂದು ಹಳ್ಳಿಯಲ್ಲಿ ಕೋವಿಡ್ ಲಸಿಕೆ ಕೆಂದ್ರಗಳನ್ನು ಪ್ರಾರಂಭ ಮಾಡಿದೆ. ಪ್ರತಿಯೊಬ್ಬರು ಲಸಿಕೆ ಹಾಕಿಕೊಂಡು ಸೋಂಕಿನಿಂದ ಮುಕ್ತರಾಗಬೇಕು ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ನಗರದ ತಹಶೀಲ ಕಚೇರಿಯ ಆವರಣದಲ್ಲಿ ಶುಕ್ರವಾರ ‘ವೈದ್ಯರ ನಡೆ, ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ ಮಾತನಾಡಿ, ತಾಲ್ಲೂಕಿನಲ್ಲಿ 12 ಪ್ರಾಥಮಿಕ ಆರೋಗ್ಯ ಕೇಂದ್ರ, 2 ಸಿ.ಎಸ್‌.ಸಿ ಕೇಂದ್ರ, 55 ಉಪ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿವೆ. ಕೋವಿಡ್ ಲಸಿಕೆ ಹಾಕಲು 10 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡ 200 ಜನರಿಗೆ ಲಸಿಕೆ ಹಾಕುತ್ತದೆ. ಆಯಾ ಗ್ರಾಮದ ಪ್ರಮುಖ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಆರೋಗ್ಯ, ಅಂಗನವಾಡಿ , ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ತಂಡದಲ್ಲಿದ್ದಾರೆ. ಪ್ರತಿ ಮನೆಯಲ್ಲಿನ ಸದಸ್ಯರಿಗೆ ಲಸಿಕೆ ಬಗ್ಗೆ ಮಾಹಿತಿ ನೀಡಿ ಲಸಿಕೆ ಹಾಕುತ್ತಾರೆ ಎಂದು ತಿಳಿಸಿದರು.

ADVERTISEMENT

ತಹಶೀಲ್ದಾರ್ ಜಗನಾಥರಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಗನಾಥಮೂರ್ತಿ, ಆರೋಗ್ಯ ಇಲಾಖೆ ಸಿಬ್ಬಂದಿ ಸಂಗಣ್ಣ ನುಚ್ಚಿನ, ಶರಣಬಸವ ಹೊಸ್ಮನಿ, ರೈತ ಮುಖಂಡ ಚೆನ್ನಪ್ಪ ಆನೇಗುಂದಿ, ಬಸವರಾಜಪ್ಪ ತಂಗಡಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.