ವಡಗೇರಾ: ಪಟ್ಟಣದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಶನಿವಾರ ಅದ್ದೂರಿಯಾಗಿ ಜರುಗಿತು.
ಶುಕ್ರವಾರ ಬೆಳಿಗ್ಗೆ ಮಾರಿಕಾಂಬ ದೇವಿಮೂರ್ತಿಯನ್ನು ಗಂಗಾಸ್ನಾನಕ್ಕೆ ತೆಗೆದುಕೊಂಡು ಹೋಗಿ ಬಂದ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಪಟ್ಟಣದ ಭಕ್ತಾದಿಗಳು ದೇವಿಗೆ ನೈವೇದ್ಯ ಸಮರ್ಪಿಸಿದರು. ಶುಕ್ರವಾರ ರಾತ್ರಿ 9 ಗಂಟೆಗೆ ಉಚ್ಚಾಯಿ ಜರುಗಿತು. ಶನಿವಾರ ಸಂಜೆ ಮಾರಿಕಾಂಬೆಯ ರಥೋತ್ಸವ ಜರುಗಿತು.
ಭಕ್ತರು ತೇರಿಗೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಅರ್ಪಿಸಿದರು. ಜಾತ್ರೆಯಲ್ಲಿ ಮಕ್ಕಳು, ಯುವಕರು ತೊಟ್ಟಿಲು, ಜೋಕಾಲಿಯಲ್ಲಿ ಕುಳಿತು ಸಂಭ್ರಮಿಸಿದರು.
ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು. ಪಿಎಸ್ಐ ಮೈಬುಬ ಅಲಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.