ADVERTISEMENT

ಮಾಚನೂರು ಗ್ರಾಮದಲ್ಲಿ ಮೂಲಸೌಕರ್ಯ ಮಾಯ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 9:23 IST
Last Updated 28 ಫೆಬ್ರುವರಿ 2026, 9:23 IST
ವಡಗೇರಾ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಸಂಗ್ರಹವಾಗಿರುವುದು
ವಡಗೇರಾ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಸಂಗ್ರಹವಾಗಿರುವುದು   

ವಡಗೇರಾ: ತಾಲ್ಲೂಕಿನ ಬಿಳ್ಹಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಮಾಚನೂರ ಗ್ರಾಮದಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮದ ಜನರು ಸಮಸ್ಯೆಗಳ ಸುಳಿಯಲ್ಲಿ ಜೀವನವನ್ನು ನಡೆಸುತಿದ್ದಾರೆ.

ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಚರಂಡಿಯ ನೀರು ರಸ್ತೆಯ ಮೇಲೆ ಹರಿದಾಡುತ್ತಿದೆ. ಜತೆಗೆ ಗುಂಡಿಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ. ಬಡಾವಣೆಯ ನಿವಾಸಿಗಳು ದಿನಾಲೂ ಈ ಹೊಲಸು ನೀರಿನಲ್ಲಿಯೆ ನಡೆಯಬೇಕು ಈ ಹೊಲಸು ನೀರಿನಲ್ಲಿ ನಡೆದಾಡುವುದರಿಂದ ಕಾಲುಗಳಿಗೆ ಗುಳ್ಳೆಗಳು ಬರುತ್ತಿವೆ. ಇದರ ಜತೆಗೆ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಹೀಗಾಗಿ ಸಾಂಕ್ರಾಮಿಕ ರೋಗದ ಭೀತಿಯನ್ನು ಗ್ರಾಮಸ್ಥರು ವ್ಯಕ್ತಪಡಿಸುತ್ತಾರೆ.

‘ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ . ಆದರೆ ಪಿಡಿಒಗಳ ಉದಾಸಿನತೆಯಿಂದ ಗ್ರಾಮದಲ್ಲಿರುವ ಶೂದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಇದರಿಂದ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಗಗನ ಕುಸುಮವಾಗಿದೆ’ ಎನ್ನುತ್ತಾರೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ.

ADVERTISEMENT

‘ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕೋಣೆಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ವರ್ಗಕೋಣೆಯಲ್ಲಿ ಕುಳಿತುಕೊಳ್ಳಲು ವಿದ್ಯಾರ್ಥಿಗಳು ಹಿಂಜರಿಯುತ್ತಾ ಭಯದಲ್ಲಿಯೆ ಶಿಕ್ಷಕರು ಮಾಡುವ ಬೋಧನೆಯನ್ನು ಕೇಳುವದು ಅನಿವಾರ್ಯವಾಗಿದೆ. ಶಾಲಾ ತಡೆಗೋಡೆ (ಕಂಪೌಂಡ್) ಬಿದ್ದು ಹೋಗಿದೆ, ಗ್ರಾಮದ ಮಹಿಳೆಯರ ಶೌಚಾಲಯ ಪಾಳು ಬಿದ್ದಿದೆ, ಹೀಗೆ ಹತ್ತು ಹಲವಾರು ಸಮಸ್ಯೆಗಳು ಗ್ರಾಮದ ಜನರು ಎದುರಿಸುತ್ತಿದ್ದಾರೆ. ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ದೂರುತ್ತಾರೆ.

ತಕ್ಷಣ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮಗಳನ್ನು ಕೈಗೊಳ್ಳುವದರ ಫಾಗಿಂಗ್ ಮಾಡುವ ಮುಖಾಂತರ ಸೊಳ್ಳೆಗಳ ನಿಯಂತ್ರಣ ಮಾಡಿ ಗ್ರಾಮಸ್ಥರಿಗೆ ಯಾವುದೇ ರೋಗ ರುಜಿನಗಳು ಬಾರದಂತೆ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಬೇಕು’ ಎಂದು ಗ್ರಾಮಸ್ಥರು ಮುಂಬರುವ ದಿನಗಳಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿಗಳ ನಿರ್ಮಾಣ ಮಾಡಿ ಗ್ರಾಮದ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಸ್ಥಳೀಯರಾದ ಮಲ್ಲಮ್ಮ, ಭೀಮಪ್ಪ, ಮಾನಪ್ಪ, ರವಿ, ಭೀಮಾಶಂಕರ, ಮಲ್ಲೇಶ, ಜಗದೀಶ, ಪವನ, ಹಣಮಂತ, ಭಾಗಪ್ಪ, ಭೀಮಪ್ಪ, ಶಂಕ್ರಪ್ಪ, ಭೀಮರಾವ್ ಸೇರಿದಂತೆ ಅನೇಕರು ಒತ್ತಾಯಿಸಿದ್ದಾರೆ.

ಸಮಸ್ಯೆ ಗಮನಕ್ಕೆ ಬಂದಿದೆ. ಶೀಘ್ರದಲ್ಲಿಯೇ ಸಮಸ್ಯೆನ್ನು ಬಗೆಹರಿಸಲಾಗುವುದು ಹಾಗೆಯೇ ಮುಂಬರುವ ದಿನಗಳಲ್ಲಿ ಮೂಲಸೌಕರ್ಯ ಗಳನ್ನು ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು
ಮಲ್ಲಿಕಾರ್ಜುನ ಸಂಗ್ವಾರ್ ತಾಪಂ ಇಒ ವಡಗೇರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.