ADVERTISEMENT

ಮೈಲಾಪುರಕ್ಕೆ ತಹಶೀಲ್ದಾರ್ ಘಂಟಿ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2019, 15:38 IST
Last Updated 2 ಜನವರಿ 2019, 15:38 IST
ಯಾದಗಿರಿ ಸಮೀಪದ ಮೈಲಾಪುರಕ್ಕೆ ಬುಧವಾರ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಮೂಲ ಸೌಕರ್ಯ ಪರಿಶೀಲಿಸಿದರು
ಯಾದಗಿರಿ ಸಮೀಪದ ಮೈಲಾಪುರಕ್ಕೆ ಬುಧವಾರ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಮೂಲ ಸೌಕರ್ಯ ಪರಿಶೀಲಿಸಿದರು   

ಯಾದಗಿರಿ: ಮೈಲಾರಲಿಂಗ ಜಾತ್ರಾ ಮಹೋತ್ಸವ ಪೂರ್ವ ಸಿದ್ಧತೆ ಕೈಗೆತ್ತಿಕೊಳ್ಳದ ಜಿಲ್ಲಾಡಳಿತ ನಿರ್ಲಕ್ಷ್ಯ ಕುರಿತು ಪ್ರಜಾವಾಣಿ ಪ್ರಕಟಿಸಿದ್ದ ವಿಶೇಷ ವರದಿಯನ್ನು ಗಮನಿಸಿದ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಬುಧವಾರ ಮೈಲಾಪುರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಜ.3ರಂದು ಸಭೆ ನಡೆಸಲಿದ್ದಾರೆ. ಈಗಾಗಲೇ ಮೈಲಾರಲಿಂಗ ಮುಖ್ಯ ದೇಗುಲದ ಬಳಿ ಭಕ್ತರಿಗೆ ನೆರಳು– ಶುದ್ಧ ಕುಡಿಯುವ ನೀರಿನ ಸೌಕರ್ಯ ಒದಗಿಸಲಾಗಿದೆ. ಉಳಿದಂತೆ ಹೊನ್ನಕೆರೆ, ಗ್ರಾಮ ಸ್ವಚ್ಛತೆ ಕುರಿತು ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT